KALPATHARU KRANTHI

ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಗುದ್ದಲಿಪೂಜೆ

Spread the love

ತುಮಕೂರು ನಗರದ ಸೋರೆಕುಂಟೆ ಬಳಿ ನಿರ್ಮಿಸಲು ಉದೇಶಿಸಿರುವ ಅಂತರಾಷ್ಟ್ರೀಯ ಕ್ರಿಕೇಟ್ ಸ್ಟೇಡಿಯಂ.ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಹಾಗೂಗೃಹಸಚಿವರಾದ ಡಾ. ಜಿ.ಪರಮೇಶ್ವರ್ ತುಮಕೂರಿನಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ,ಭೂಮಿಯು ಮಂಜೂರಾಗಿರುವ ಆದೇಶಪತ್ರವನ್ನು
ಕೆ.ಎಸ್‌.ಸಿ.ಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ
ಹಸ್ತಾಂತರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ವರ್ಷಗಳ ಸುಧೀರ್ಘ ರಾಜಕಾರಣದ ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ, ನಾನುಯಾರ ಕುತಂತ್ರ ಬೆದರಿಕೆಗಳಿಗೆಹೆದರುವ ಪ್ರಶ್ನೆಯೇ ಇಲ್ಲ ಎಂದು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ ಎನ್.ಡಿ.ಎ. ನಾಯಕರಿಗೆ ಟಾಂಗ್ ನೀಡಿದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ,ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೇಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ತರಬೇತಿಗೆ ಅಡಿಗಲ್ಲು ಕಲಾಗಿದೆ. ಕೆ.ಎಸ್.ಸಿ.ಎ ಎರಡು ವರ್ಷದಲ್ಲು ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ ಎಂದರು
ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ನೀಡಲಾಗಿದೆ. ಏಷ್ಯದಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ದಿಧದಾರೆ ಪುಡ್ ಪಾರ್ಕಿಂಗ್ ನಿರ್ಮಾಣ ಸೇರಿದಂತೆ ವಿಶ್ವದರ್ಜೆಯ ಸವಲತ್ತು ನೀಡಲಾಗುವುದು, ಕೆಲವೇ ವರ್ಷಗಳಲ್ಲಿ ತುಮಕೂರಿನ ಚಿತ್ರಣವೇ ಬದಲಾಗಲಿದೆ , ಜಪಾನೀಸ್
ಟೌಪ್‌ಶಿಪ್ ನಿರ್ಮಾಣಕ್ಕೆ 500 ಎಕರೆ ಭೂಮಿನೀಡಲಾಗಿದೆ, ಈ ಭಾಗದ ಜನರು ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿಯನ್ನು
ಕಳೆದುಕೊಂಡಿದ್ದು, ಅವರಿಗೆ ಉದ್ಯೋಗ ಸಿಗುವಂತಾಗಬೇಕು.ಸ್ಥಳೀಯರಿಗೆ ಹೆಚ್ಚಿನ ಒತ್ತು ನೀಡಬೇಕು. ತುಮಕೂರುಜಿಲ್ಲೆ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಅನುದಾನ ನೀಡಬೇಕು, ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ,ಸಹಕಾರಿ ಸಚಿವ ಕೆ.ಎನ್ .ರಾಜಣ್ಣ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ
ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜು, ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಎಸ್.ಆರ್ ಶ್ರೀನಿವಾಸ್,ವೆಂಕಟೇಶ್.ಎಂ.ಎಲ್.ಸಿ ರಾಜೇಂದ್ರ, ಮುಖಂಡರಾದ ಗೋವಿಂದರಾಜು,ಚಂದ್ರಶೇಖರ್ ಗೌಡ, ಮುರುಳಿಧರ ಹಾಲಪ್ಪ ಮುಂತ್ತಾದವರು ಉಪಸ್ಥಿತರಿದರು

ವರದಿ: ಮಂಜುನಾಥ್ ಹಾಲ್ಕುರಿಕೆ

Exit mobile version