
ತಿಪಟೂರು ತಾಲ್ಲೋಕಿನ ಪುಣ್ಯಕ್ಷೇತ್ರ ಕಲ್ಪತರು ನಾಡಿನ ಶಕ್ತಿಪೀಠ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಧನುರ್ಮಾಸ ಹುಣ್ಣಿಮೆ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿ ಹಾಗೂ ಶ್ರೀ ಕರಿಯಮ್ಮ ದೇವಿಯವರಿಗೆ ವಿಶೇಷ. ಅಲಂಕಾರ ಹಾಗೂ ಪೂಜೆ ನೆರವೇರಿಸಲಾಯಿತು. ಆದಿಚುಂಚನಗಿರಿ ದಸರೀಘಟ್ಟ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಚಂದ್ರಶೇಖರನಾಥ ಮಹಾಸ್ವಾಮಿಗಳ ನೇತೃತ್ವದಲ್ಲಿ ದೀಪಾರಾಧನೆ ಹಾಗೂ ಪ್ರಾಕಾರೋತ್ಸವ ನೆರವೇರಿಸಲಾಯಿತು.ಶ್ರೀ ಚೌಡೇಶ್ವರಿ ಉತ್ಸವ ಮೂರ್ತಿಯನ್ನ ರಥದಲ್ಲಿ ಕೂರಿಸಿ ಉತ್ಸವ ನೆರವೇರಿಸಲಾಯಿತು
ಧನುರ್ಮಾಸ ಹುಣ್ಣಿಮೆ ಅಂಗವಾಗಿ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದರು
ವರದಿ: ಮಂಜುನಾಥ್ ಹಾಲ್ಕುರಿಕೆ