KALPATHARU KRANTHI

ಕರಡಿ ಗ್ರಾಮಪಂಚಾಯ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮಳೆನೀರುಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕಾರ್ಯಗಾರ

Spread the love

ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ತುಮಕೂರು ತಾಲ್ಲೋಕು ಪಂಚಾಯ್ತಿ ತಿಪಟೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ತುಮಕೂರು, ಉಪ ವಿಭಾಗ ತಿಪಟೂರು.ಕರಡಿ ಗ್ರಾಮ ಪಂಚಾಯ್ತಿ ಪುಣ್ಯಕೋಟಿ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ತುಮಕೂರು, ಇವರ ಸಂಯುಕ್ತ ಆಶ್ರಯದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ತರಬೇತಿ ಕಾರ್ಯಕ್ರಮ ನಡೆಸಲಾಯಿತು.ಕರಡಿ ಗ್ರಾಮಪಂಚಾಯ್ತಿ ಅಧ್ಯಕ್ಷ ಜಯರಾಮ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜು ಮಾತನಾಡಿ, ಅನಗತ್ಯವಾಗಿ ವ್ಯಯ ಮಾಡುವ ಬದಲು, ಮಳೆನೀರು ಕೋಯ್ಲು ವಿಧಾನದ ಮೂಲಕ ನೀರು ಸಂರಕ್ಷಣೆ ಮಾಡಿ ಬಳಸ ಬಹುದು, ಹಾಗೂ ನೀರು ಭೂಮಿಯಲ್ಲಿ ಇಂಗುವಂತ್ತೆ ಮಾಡಬಹುದು.
ಬೂದು ನೀರು ನಿರ್ವಹಣೆ ,ಇಂಗು ಗುಂಡಿಗಳನ್ನು ನಿರ್ಮಾಣ ಮಾಡಿಕೊಂಡು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದರೆ,ಭವಿಷ್ಯದಲ್ಲಿ ನೀರಿನ ಸಮಸ್ಯೆಗೆ ಪರಿಹಾರವಾಗುವುದು.
ಮೇಲ್ಮೈ ಮಳೆ ನೀರು ಕೊಯ್ಲು ಕಾರ್ಯಕ್ರಮದಲ್ಲಿ ಜಮೀನುಗಳಲ್ಲಿ ಕೃಷಿ ಹೊಂಡ, ಕ್ಷೇತ್ರಬದುಗಳನ್ನ ಮಳೆ ನೀರು ಹಿಂಗುವಂತಹ ರಚನೆಗಳಲ್ಲಿ ನಿರ್ಮಾಣ ಮಾಡುವುದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಹಾಗೂ ಮಣ್ಣಿನ ಸವಕಳಿಯನ್ನು ತಡೆಯಲು ಅನುಕೂಲವಾಗುತ್ತದೆ. ರೈತರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಯಡಿ ಅವಕಾಶಗಳಿದ್ದು, ರೈತರು ಹಾಗೂ ಗ್ರಾಮೀಣ ಭಾಗದ ಜನ ಸದುಪಯೋಗಪಡಿಸಿಕೊಳ್ಳ ಬಹುದು, ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ. ಕರಡಿ ಗ್ರಾಮಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕವಿತ,ಸಂಪನ್ಮೂಲ ವ್ಯಕ್ತಿಗಳಾದ ದೇವರಾಜು ಬಿ. ಕೆ. ಐ ಎಸ್ ಆರ್ ಎ ಸಿಬ್ಬಂದಿ ಭರತ್ ಕುಮಾರ್ ಮುಂತ್ತಾದವರು ಉಪಸ್ಥಿತರಿದರು

ವರದಿ:ಮಂಜುನಾಥ್ ಹಾಲ್ಕುರಿಕೆ

Exit mobile version