ತುಮಕೂರು ಜಿಲ್ಲೆ ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ ರಂಗಾಪುರ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರ ಸಂಘದ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ದಾಖಲೆಗಳನ್ನ ಕಳ್ಳವು ಮಾಡಿರುವ ಘಟನೆ ನಡೆದಿದೆ.
ರಾತ್ರಿ 1.00 ರಿಂದ 2 ಗಂಟೆಯ ಸಮಯದಲ್ಲಿ ಬಾಗಿಲನ್ನು ಗ್ಯಾಸ್ ಕಟ್ಟರ್ ನಿಂದ ಮುರಿದು ಬ್ಯಾಂಕ್ ಒಳಗೆ ನುಗ್ಗಿ ಸಿಸಿಟಿವಿಯ ಡಿವಿಯರ್, ಖಜಾನೆಯಲ್ಲಿದ್ದ ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಳನ್ನು ತೆಗೆದುಕೊಂಡು, ದಾಖಲೆಗಳ ಪುಸ್ತಕವನ್ನು ಚೆಲ್ಲಾಡಿ ಕಳ್ಳತನ ಮಾಡಿದ್ದಾರೆ.
ಸ್ಥಳಕ್ಕೆ ತಿಪಟೂರು ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ,ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿಕುಮಾರ್ ಸ್ಥಳಪರಿಶೀಲನೆ ಮಾಡಿದ್ದು,
ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ,
ವರದಿ :ಮಂಜುನಾಥ್ ಹಾಲ್ಕುರಿಕೆ
