KALPATHARU KRANTHI

77ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ

Spread the love

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿ ಸಂಪಿಗೆ ಹೊಸಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸರಳವಾಗಿ 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆಚರಿಸಲಾಯಿತು. ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಯೋಗೀಶ್ ನಮ್ಮ ದೇಶದಲ್ಲಿ ಭಾರತೀಯ ಸಂವಿಧಾನ ಜಾರಿಯಾಗಿ ಇಂದು 77ನೇ ವರ್ಷದ ಪ್ರಸ್ತುತದಲ್ಲಿ ನಮ್ಮ ಸಂವಿಧಾನ ಎಲ್ಲಾ ಸವಲತ್ತುಗಳನ್ನು ನಮಗೆ ನೀಡಿದೆ ಇಂತಹ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಪ್ರಜ್ಞಾವಂತ ಪ್ರಜೆಗಳಾಗಬೇಕಾಗಿದೆ ಎಂದರು. ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಯೋಗೀಶ್ ಕಾರ್ಯದರ್ಶಿಗಳಾದ ಶ್ರೀ ಗಂಗಾಧರ್ ಹಾಗೂ ಪಂಚಾಯತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ: ಸಂತೋಷ್ ಓಬಳ. ತುರುವೇಕೆರೆ

Exit mobile version