
ಗುಬ್ಬಿ ತಾಲ್ಲೂಕಿನ ಕಡಬಾ ಹೋಬಳಿ ಮಾರುಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 77ನೇ ಭಾರತೀಯ ಗಣರಾಜ್ಯೋತ್ಸವವನ್ನು ಆಚರಿಸಲಾಗಿತು ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ನಾಗೇಶ್ ಇಂದು ನಾವು ಆಚರಿಸುವ 77ನೇ ಗಣರಾಜ್ಯೋತ್ಸವ ದಿನಾಚರಣೆಯು ಅನೇಕ ನಮ್ಮ ರಾಷ್ಟ್ರ ನಾಯಕರ ಅವಿರತ ಹೋರಾಟದ ಫಲವಾಗಿದೆ ಅಂತಹ ರಾಷ್ಟ್ರ ನಾಯಕರ ಸ್ಮರಿಸಿ ನಮ್ಮ ಸಂವಿಧಾನವನ್ನು ಗೌರವಿಸಬೇಕಾಗಿರುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಅಲ್ಲದೆ ನಮಗೆ ಸಿಕ್ಕ ಅಧಿಕಾರವನ್ನು ಜನರ ಹಿತಕ್ಕೆ ಬಳಸಿ ಈ ಮೂಲಕ ಅಭಿವೃದ್ಧಿ ಕಾಣಬೇಕಾಗಿದೆ ಎಂದರು.
ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ ನಾಗೇಶ ಶ್ರೀ ನಾಗೇಶ್ ಹಾಗೂ ಪಂಚಾಯತಿ ಸರ್ವ ಸದಸ್ಯರು ಹಾಗೂ ಪಂಚಾಯತಿಯ ಸಿಬ್ಬಂದಿ ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.
ವರದಿ: ಸಂತೋಷ್ ಓಬಳ. ಗುಬ್ಬಿ