KALPATHARU KRANTHI

ಡಿಸೆಂಬರ್ 24 ಬುಧವಾರ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ -2025

Spread the love

ತಿಪಟೂರು:ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 24ರಂದು ಬುಧವಾರ ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ಮೂಡಬಿದರೆ,ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ವಿದ್ಯಾಸಂಸ್ಥೆ ಸುಕ್ಷೇತ್ರ ಕೆರೆಗೋಡಿ-ರಂಗಾಪುರ,ಕಲಾಕೃತಿ ತಿಪಟೂರು,ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.


ನಗರದ ಕೌಸ್ತುಭ ಹೋಟೆಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಖ್ಯಾತವೈದ್ಯರಾದ ಡಾ//ಶ್ರೀಧರ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ)ವಿದ್ಯಾಸಂಸ್ಥೆ ದೇಶದ ಪ್ರತಿಷ್ಟಿತ ವಿದ್ಯಾಸಂಸ್ಥೆಯಾಗಿದ್ದು,ದೇಶದ ಕಲಾಸಂಸ್ಕೃತಿಯ ಪ್ರತಿಬಿಂಬಿಸುವ ಹಲವಾರು ನೃತ್ಯಗಳನ್ನ ನುರಿತ ತರಬೇತುದಾರರಿದ ತರವೇತಿ ಪಡೆದ ಶಾಲಾವಿದ್ಯಾರ್ಥಿಗಳು ಆಳ್ವಾಸ್ ಸಾಂಸ್ಕೃತಿಕ ವೈಭವದಲ್ಲಿ ಪ್ರಸ್ತುತ ಪಡೆಸಲಿದ್ದಾರೆ.ರಾಜ್ಯದಾದ್ಯಂತ ವಿಶಿಷ್ಠ ಮನ್ನಣೆ ಪಡೆದಿರುವ ಕಾರ್ಯಕ್ರಮ ನಮ್ಮ ತಿಪಟೂರಿನಲ್ಲಿ ಆಯೋಜನೆ ಮಾಡಲು ಅವಕಾಶ ದೊರೆತಿರುವುದು, ಸಂತೋಷದ ವಿಷಯವಾಗಿದೆ. ಸಂಜೆ 5.45ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ದಿವ್ಯಸಾನಿಧ್ಯವಹಿಸಲಿದ್ದು.ಶಾಸಕ ಕೆ.ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.ಜಿ.ಪಂ ಸಿಇಒ ಪ್ರಭು.ಜಿಲ್ಲಾಧಿಕಾರಿ ಶುಭಕಲ್ಯಾಣ್.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ//ಮೋಹನ್ ಆಳ್ವಾ.ನಮ್ರತಾ ಆಯಿಲ್ ರಿಪೈನರಿಸ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಎಸ್ ಅರುಣ್ ಕುಮಾರ್.ಬಿ.ಎಸ್ ಶಿವಪ್ರಸಾದ್‌.ಡಾ//ವಿವೇಚನ್.ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು.ಡಿಸೆಂಬರ್ 14ರಂದು ಬುಧವಾರ ಬೆಳಗ್ಗೆ ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಆಡಿಟೋರಿಯಂ ನಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ತಜ್ಞರು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕಾಗಿ ತಿಳಿಸಿದರು
ಪತ್ರಿಕಾ ಘೋಷ್ಠಿಯಲ್ಲಿ ಕಲಾಕೃತಿ ಪ್ರಧಾನ ಕಾರ್ಯದರ್ಶಿ ಜ್ಯೋತಿಗಣೇಶ್.ವೋಡಪೋನ್ ಚಂದ್ರು.ತಿಪಟೂರು ಕೃಷ್ಣ.ಕಿರಣ್ ಕುಮಾರ್ .ತೋಂಟಾರಾಧ್ಯ ಉಪಸ್ಥಿತರಿದರು

ವರದಿ:ಮಂಜುನಾಥ್ ಹಾಲ್ಕುರಿಕೆ

Exit mobile version