ತಿಪಟೂರು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ ಸುದರ್ಶನ್ ರವರಿಗೆ ಸರ್ಕಾರ 2024 -25 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡದೆ.
ಉದ್ಯೋಗ ಖಾತ್ರಿ ಯೋಜನೆ, ವಸತಿ ಯೋಜನೆ ಸಾರ್ವಜನಿಕ ಆಡಳಿತ ಸೇರಿದಂತೆ ಗ್ರಾಮೀಣ ಅಭಿವೃದ್ಧಿ ಹಾಗೂ ತಾಲ್ಲೋಕಿನಲ್ಲಿ ಪಂಚಾಯತ್ ರಾಜ್ ಇಲಾಖೆಯ ಸರ್ವಾಂಗಿಣ ಅಭಿವೃದ್ಧಿಗೆ ಪೂರಕವಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ .ಹೆಚ್.ಎಂ ಸುದರ್ಶನ್ ರವರಿಗೆ ಸರ್ಕಾರ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತಿದ್ದು. ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಾಳೆ ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ .ತಾಲ್ಲೋಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಶಸ್ತಿ ಸಂದ ಹಿನ್ನೆಲೆ ತಿಪಟೂರು ತಾಪಂನ ಎಲ್ಲಾ ನೌಕರರು ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಕಾರ್ಯದರ್ಶಿಗಳು.ಸಂಘಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ :ಮಂಜುನಾಥ್ ಹಾಲ್ಕುರಿಕೆ
