KALPATHARU KRANTHI

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಿವೈಎಸ್ಪಿ ಎಂ.ಎಚ್. ಉಮೇಶ್.

Spread the love

ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಕುಂದುಕೊರತೆಗಳ ಸಭೆ; ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಲು ಕರೆ.

ತಿಪಟೂರು, ಜು. 12: ಸಾರ್ವಜನಿಕರಿಗೆ ಪೊಲೀಸ್ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ತಿಪಟೂರು ಉಪವಿಭಾಗದ ಡಿವೈಎಸ್ಪಿ ಎಂ.ಎಚ್. ಉಮೇಶ್ ಹೇಳಿದರು.
ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ವರ್ಗಗಳ ಕುಂದುಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ.
ಹಿರಿಯ ನಾಗರಿಕರ ಸುರಕ್ಷತೆ ಹಾಗೂ ನೆರವಿಗಾಗಿ ‘ಆಸರೆ’ಪೊಲೀಸ್ ಯೋಜನೆ ಜಾರಿಯಲ್ಲಿದ್ದು, ವಯೋವೃದ್ಧರಿಗೆ ಎದುರಾಗುವ ಸಮಸ್ಯೆಗಳ ಬಗ್ಗೆ ಬೀಟ್ ಪೊಲೀಸರಿಗೆ ಮಾಹಿತಿ ನೀಡಿದರೆ ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಮಾನವೀಯ ಸಹಾಯವನ್ನು ಇಲಾಖೆ ಒದಗಿಸಲಿದೆ.ಪೊಲೀಸ್ ಇಲಾಖೆ
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಾದಕ ವ್ಯಸನ ಮತ್ತು ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ.ಎನ್ ಕಾರ್ಡ್ ಪೊಲೀಸ್ ವ್ಯವಸ್ಥೆ ಜಾರಿಮಾಡಿ ಮಾಡಿದೆ ಮಾದಕ ವಸ್ತುಗಳ ಮಾರಾಟ ಅಥವಾ ವ್ಯಸನಿಗಳ ಕುರಿತು ಮಾಹಿತಿ ನೀಡಿದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಇಲಾಖೆ ಬದ್ಧವಾಗಿದೆ.ಎಂದು ತಿಳಿಸಿದರು.


ಸಭೆಯಲ್ಲಿ ದಲಿತ ಮುಖಂಡರು ಮಾತನಾಡಿ, ಹೊನ್ನವಳ್ಳಿ ವ್ಯಾಪ್ತಿಯ ಹಾಲ್ಕುರಿಕೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೆಲವು ಬಾರ್ ಮಾಲೀಕರು ನೇರವಾಗಿ ದಲಿತ ಕೇರಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವುದರಿಂದ ಕೇರಿಗಳು ಮದ್ಯ ಮಾರಾಟದ ಅಡ್ಡೆಗಳಾಗುತ್ತಿವೆ. ಇಂತಹ ಬಾರ್ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗ್ರಾಮಗಳ ಸಾರ್ವಜನಿಕ ದೇವಾಲಯಗಳಲ್ಲಿ ದಲಿತರಿಗೆ ಮುಕ್ತ ಪ್ರವೇಶವಿದ್ದು, ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎಂಬುದನ್ನು ಸೂಚಿಸುವ ನಾಮಫಲಕಗಳನ್ನು ದೇವಾಲಯಗಳ ಪ್ರವೇಶದ್ವಾರಗಳಲ್ಲಿ ಅಳವಡಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.
ಸಭೆಯಲ್ಲಿ ಹೊನ್ನವಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಮೇಶ್ ಗುಗ್ಗರಿ. ಮುಖಂಡರಾದ ನಾಗ್ತಿಹಳ್ಳಿ ಕೃಷ್ಣಮೂರ್ತಿ, ಬಾಗುವಾಳ ಲಿಂಗರಾಜು, ರಾಮನಾಯ್ಕ, ಲಕ್ಷ್ಮಿ, ಹೊನ್ನೇಶ್.ಶಂಕರಪ್ಪ ಸೇರಿದಂತೆ ಮುಂತ್ತಾದವರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version