KALPATHARU KRANTHI

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ತರಳಬಾಳು ಶ್ರೀಗಳ ಕಂಬನಿ.

Spread the love

ತಿಪಟೂರು: ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ತರಳಬಾಳು ಬೃಹನ್ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಡಾ// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಬಿ.ಸಿ. ನಾಗೇಶ್ ಅವರು ಸರಳ, ಸಜ್ಜನಿಕೆಯ ಹಾಗೂ ರಾಷ್ಟ್ರಭಕ್ತ ರಾಜಕಾರಣಿಯಾಗಿದ್ದರು. ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದರು. ತರಳಬಾಳು ಶ್ರೀಮಠದೊಂದಿಗೆ ಅವರು ಅವಿನಾಭಾವ ಸಂಬಂಧ ಹೊಂದಿದ್ದರು ಎಂದು ಶ್ರೀಗಳು ಸ್ಮರಿಸಿದ್ದಾರೆ.

ಅವರ ನಿಧನದಿಂದ ನಾಡು ಒಬ್ಬ ಸರಳ ಸಜ್ಜನಿಕೆಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಬಿ.ಸಿ. ನಾಗೇಶ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶ್ರೀಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version