KALPATHARU KRANTHI

ದಾಸನಕಟ್ಟೆಗೊಲ್ಲರಹಟ್ಟಿಯಲ್ಲಿಭೂತಪ್ಪಸ್ವಾಮಿ ಹಬ್ಬದ ಅಂಗವಾಗಿ ಸೆ.22ರಂದು ಕುರುಕ್ಷೇತ್ರ ನಾಟಕ

Spread the love

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ದಾಸನಕಟ್ಟೆ ಗೊಲ್ಲರಹಟ್ಟಿಯಲ್ಲಿ ನಡೆಯುತ್ತಿರುವ ಶ್ರೀ ಭೂತಪ್ಪಸ್ವಾಮಿ ಹಬ್ತ್ಸವದ ಅಂಗವಾಗಿ ಸೆ.22ರಂದು ಸಂಜೆ 5.30ಕ್ಕೆ ‘ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ’ ಎಂಬ ಪೌರಾಣಿಕ ನಾಟಕವನ್ನು ಆಯೋಜಿಸಲಾಗಿದೆ.

ಈ ಕುರಿತು ನಗರದ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ಜಗದೀಶ್ ಯಾದವ್ ಮಾತನಾಡಿ, ದಾಸನಕಟ್ಟೆ ಗೊಲ್ಲರಹಟ್ಟಿಯಲ್ಲಿ ಶ್ರೀ ಭೂತಪ್ಪಸ್ವಾಮಿ ಜಾತ್ರೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಜಾತ್ರೆಯ ಅಂಗವಾಗಿ ಪೌರಾಣಿಕ ನಾಟಕವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮಕ್ಕೆ ತುಮಕೂರು ಸಂಸ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ, ಅಬಕಾರಿ ಸಚಿವ ಶಿವಲಿಂಗೇಗೌಡ, ತಿಪಟೂರು ಶಾಸಕ ಕೆ. ಷಡಕ್ಷರಿ, ಕೆಪಿಸಿಸಿ ಸದಸ್ಯ ವಿ. ಯೋಗೀಶ್, ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್, ಹೊನ್ನವಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಅಶ್ವತ್ಥನಾರಾಯಣ್, ಡಾ. ಶ್ರೀಧರ್, ಸಿ.ಬಿ. ಶಶಿಧರ್, ಲೋಕೇಶ್ವರ, ನಿಖಿಲ್ ರಾಜಣ್ಣ, ವಿಶ್ವದೀಪ್ ನಾಗೇಶ್, ಶಂಕರಪ್ಪ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಡುಗೊಲ್ಲ ಸಂಘದ ಅಧ್ಯಕ್ಷ ಬಾಲರಾಜು, ಜಗದೀಶ್ ಯಾದವ್, ಹರೀಶ್, ಜಯಣ್ಣ, ಶಿವಕುಮಾರ್ ಮತ್ತಿಹಳ್ಳಿ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version