KALPATHARU KRANTHI

ಮಳೆ ನೀರಿನಲ್ಲಿ ಕೊಚ್ಚಿಹೋದ ಹೆಚ್.ಭೈರಾಪುರ ಸೇತುವೆ; ಸಂಚಾರ ಅಸ್ತವ್ಯಸ್ತ

Spread the love

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಭಾಗದಲ್ಲಿ ಸುರಿದ ಮಳೆಯಿಂದಾಗಿ ಹೆಚ್.ಭೈರಾಪುರ ಬಳಿ ನೂತನ ಸೇತುವೆ ನಿರ್ಮಾಣಕ್ಕಾಗಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಮಳೆ ನೀರಿನಲ್ಲಿ ಕೊಚ್ಚಿಹೋಗಿದೆ. ಇದರಿಂದ ತಿಪಟೂರು–ಹುಳಿಯಾರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ತಾತ್ಕಾಲಿಕ ಸೇತುವೆ ಕೊಚ್ಚಿಹೋದ ಪರಿಣಾಮ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲದಂತಾಗಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ತುರ್ತಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲವೇ ನಿರ್ಮಾಣ ಹಂತದಲ್ಲಿರುವ ನೂತನ ಸೇತುವೆಯ ಬಳಿ ಸುರಕ್ಷಿತವಾಗಿ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ :ಮಂಜನಾಥ್ ಹಾಲ್ಕುರಿಕೆ

Exit mobile version