
ತುಮಕೂರು ಜಿಲ್ಲೆ ತಿಪಟೂರು ತಾಲ್ಲೋಕಿನ ಅರಳಗುಪ್ಪೆ ರೈಲು ನಿಲ್ದಾಣದಲ್ಲಿ ಚಿಕ್ಕಮಂಗಳೂರು ರೈಲು ಗಾಡಿ ನಿಲುಗಡೆಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ,ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹಸಿರು ನಿಶಾನೆ ತೋರಿದರು

ಅರಳಗುಪ್ಪೆ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಕೇಂದ್ರ ಸರ್ಕಾರದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಹಣಕಾಸಿನ ಕೊರತೆಇಲ್ಲ, ರೈಲ್ವೆಯೋಜನೆ ಅಭಿವೃದ್ದಿಗೆ ಸಾಕಷ್ಟು ಹಣಕಾಸಿನ ನೆರವು ನೀಡುತ್ತಿದ್ದೆ,ತಿಪಟೂರಿಗೆ ಶೀಘ್ರದಲ್ಲಿಯೇ,ಮೆನೋ ರೈಲು ಕಾರ್ಯರಂಭ ಮಾಡಲಿದೆ, ತಿಪಟೂರು ರೈಲು ನಿಲ್ದಾಣ ಅಭಿವೃದ್ದಿ ಕಾಮಗಾರಿ ಪ್ರಗತಿಯಲ್ಲಿದ್ದು,ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು,ತಿಪಟೂರು ತಾಲ್ಲೋಕಿನ ಪ್ರಸಿದ್ದ ಕ್ಷೇತ್ರ ಕೆರಗೋಡಿ ರಂಗಾಪುರ ಸುಕ್ಷೇತ್ರಕ್ಕೆ ಸಂಪರ್ಕಿಸುವ ರಸ್ತೆ ವಿಸ್ತರಣೆ ಹಾಗೂ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ವೇ ಕಾರ್ಯಕ್ಕೆ ಆದೇಶ ನೀಡಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಮೇಲ್ಸೇತುವೆ ನಿರ್ಮಾಣಕ್ಕೆ ಇರುವ ತೊಡಕು ನಿವಾರಿಸಲಾಗುವುದು.ಜ್ಞಾಸದಾಸೋಹಿ ಸಿದ್ದಗಂಗ ಶ್ರೀಗಳ ಹೆಸರಿನಲ್ಲಿ ಖ್ಯಾತಸಂದ್ರ ರೈಲು ನಿಲ್ದಾಣ 100ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸುವ ಯೋಜನೆ ರೂಪಿಸಲಾಗುತ್ತಿದೆ,ತಿಪಟೂರು ತಾಲ್ಲೋಕಿನ ನೊಣವಿನಕೆರೆ ಹೊಬಳಿಯಲ್ಲಿ ಕೈಗಾರಿಕೆಗಳಿಗೆ ಸ್ಥಾಪನೆಗೆ ಅಗತ್ಯವಿರುವ ಭೂಮಿ ನೀಡಿದರೆ, ಕೇಂದ್ರ ಕೈಗಾರಿಕ ಸಚಿವ ಹೆಚ್.ಡಿ ಕುಮಾರಸ್ವಾಮಿಯವರೊಂದಿಗೆ ಮಾತನಾಡಿ ಕೈಗಾರಿಕೆಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು,ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ತುಮಕೂರು ಶಾಸಕ ಬಿ.ಜಿ ಜ್ಯೋತಿಗಣೇಶ್,ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್,ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್,ಮುಂತ್ತಾದವರು ಉಪಸ್ಥಿತರಿದರು





