
ತುರುವೇಕೆರೆ ನಗರದ ಡಾ//ಬಿ.ಆರ್ ಅಂಬೇಡ್ಕರ್ ಭವನದ ಜಾಗವನ್ನ ಕೆಲವು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು,ಅನಾಧೀಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ,ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಕೂಡಲೇ ತೆರವುಗೊಳಿಸಬೇಕು,ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ,

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೊಕ್ ಸಂಚಾಲಕ ಕೃಷ್ಣ ಮಾದಿಗ ಮಾತನಾಡಿ, ಅಂಬೇಡ್ಕರ್ ಭವನದ ಜಾಗವನ್ನ ಒತ್ತುವರಿ ಮಾಡಿರುವ ಬಗ್ಗೆ ಪಟ್ಟಣ ಪಂಚಾಯಿತಿಗೆ ಹಲವರು ದೂರು ಕೊಟ್ಟರು ಏನು ಪ್ರಯೋಜವಾಗಿಲ್ಲ, ಪಟ್ಟಣಪಂಚಾಯ್ತಿಗೆ ಸೇರಿದ ಸ್ವತ್ತನ್ನ ರಕ್ಷಣೆ ಮಾಡಲು ಪಟ್ಟಣ ಪಂಚಾಯ್ತಿ ವಿಫಲವಾಗಿದೆ.ಸಾರ್ವಜನಿಕರಿಗೆ ಸೇರಿದ ಸ್ಥಳವನ್ನ ಅತಿಕ್ರಮಿಸಿದ್ದರೂ,ಪಟ್ಟಣಪಂಚಾಯ್ತಿ ಅಧಿಕಾರಿಗಳು ಪ್ರಬಾವಿಗಳ ಒತ್ತಡಕ್ಕೆ ಮಣಿದು ಕೈಕಟ್ಟಿಕುಳಿತ್ತಿದ್ದಾರೆ.ದಲಿತಪರ ಸಂಘಟನೆಗಳ ಮುಖಂಡರು ಅನೇಕಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ, ಅಂಬೇಡ್ಕರ್ ಭವನದ ಜಾಗ ಅತಿಕ್ರಮಿಸಿ ಅನಾಧೀಕೃತ ಕಟ್ಟಡ ನಿರ್ಮಿಸಲಾಗಿದೆ.ಅಂಬೇಡ್ಕರ್ ಭವನಕ್ಕೆ ಸಂಬಂದಿಸಿದ ಎಲ್ಲಾ ದಾಖಲೆಗಳೊಂದಿಗೆ ಮೇಲಧಿಕಾರಿಗಳಿಗೂ ದೂರು ನೀಡಲಾಗಿದೆ. ಅಂಬೇಡ್ಕರ್ ಭವನದ ಜಾಗ ಒತ್ತುವರಿಯಾಗಿದ್ದು ತೆರವು ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ, ಪಟ್ಟಣ ಪಂಚಾಯ್ತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ.ಸರ್ಕಾರ ಕೂಡಲೇ ಅಂಬೇಡ್ಕರ್ ಭವನದ ಸರ್ಕಾರಿ ಸ್ವತ್ತು ರಕ್ಷಣೆ ಮಾಡಲು ವಿಫಲವಾದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳನ್ನ ಅಮಾನತ್ತುಗೊಳಿಸಬೇಕು ಹಾಗೂ ಕೂಡಲೇ ಒತ್ತುವರಿ ತೆರವುಗೊಳಿಸುವ ವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾಸಂಘಟನಾ ಸಂಚಾಲಕ ಕುಂದೂರು ಮುರುಳಿ ಮಾತನಾಡಿ ಸ ನಾಲ್ಕೈದು ವರ್ಷಗಳಿಂದಲೂ ಇದರ ಬಗ್ಗೆ ಹಲವು ಬಾರಿ ಪಟ್ಟಣ ಪಂಚಾಯಿತಿಗೆ ದೂರು ಕೊಟ್ಟರು ಏನು ಪ್ರಯೋಜನವಾಗಿಲ್ಲ ಜೊತೆಗೆ ಉಪ ವಿಭಾಗಾಧಿಕಾರಿಗಳು ಸಿಇಓ, ಹಾಗೂ ಜಿಲ್ಲಾಧಿಕಾರಿಗಳಿಗೂ ದೂರು ನೀಡಲಾಗಿದೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸಹ ಜಾಗ ಒತ್ತೂವರಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಅಧಿಕಾರಿಗಳಿಗೆ ಕೂಡಲೇ ಈ ಜಾಗವನ್ನು ತೆರೆವು ಗೊಳಿಸಬೇಕೆಂದು ಸೂಚನೆ ಸಹ ನೀಡಿದ್ದಾರೆ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ನಿರ್ಲಕ್ಷ್ಯ ಹೊಂದಿದ್ದಾರೆ.ಮೇಲಾಧಿಕಾರಿಗಳ, ಆದೇಶಕ್ಕೂ ತಲೆಕೆಡಿಸಿಕೊಳ್ಳದೆ.ಕೈಕಟ್ಟಿಕುಳಿತ್ತಿದ್ದಾರೆ, ಸರ್ಕಾರ ಕೂಡಲೆ ಒತ್ತುವರಿ ತೆರವು ಮಾಡದೆ ನಿರ್ಲಕ್ಷ್ಯ ಮಾಡಿರುವ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯನ್ನ ಅಮಾನತ್ತುಗೊಳಿಸಬೇಕು ಹಾಗೂಅಂಬೇಡ್ಕರ್ ಭವನದ ಜಾಗದ ಒತ್ತುವರಿ ತೆರವುಮಾಡಬೇಕು ನಮ್ಮ ಹೋರಾಟ ನ್ಯಾಯದ ಪರವಾಗಿದ್ದು, ನಮ್ಮ ಹೋರಾಟಕ್ಕೆ ನ್ಯಾಯ ಸಿಗಯವವರೆಗೂ ಹೋರಾಟದಿಂದ ಹಿಂದೆಸರಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನೆಯಲ್ಲಿ ಶಿವರಾಜ್, ಸುನಿಲ್, ಪ್ರಸಾದ್, ಇನ್ನೂ ಮುಂತ್ತಾದವರು ಉಪಸ್ಥಿತರಿದ್ದರು.
ವರದಿ:ಸಂಪಿಗೆ ಮೂರ್ತಿ,



