ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ರೋಗದ ಅರಿವು ಹಾಗೂ ತಪಾಸಣೆ ಕಾರ್ಯಕ್ರಮ.

Spread the love

ಆರೋಗ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ ತಿಪಟೂರು ವತಿಯಿಂದ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಸಾರ್ವಜನಿಕ ಆಸ್ಪತ್ರೆ ತಿಪಟೂರು ಆವರಣದಲ್ಲಿಕ್ಯಾನ್ಸರ್ ರೋಗದ ಕುರಿತು ಅರಿವು ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಅಧಿಕಾರಿಗಳಾದ, ಶ್ರೀಮತಿ ಡಾಕ್ಟರ್ ರಾಧಿಕಾ ರವರು ಉದ್ಘಾಟಿಸಿದರು, ಆಸ್ಪತ್ರೆಯ ತಜ್ಞ ವೈದ್ಯರಾದ ಡಾಕ್ಟರ್ ರಕ್ಷಿತ್ ಗೌಡ ಮಾತನಾಡಿ ಕ್ಯಾನ್ಸರ್ ಕಾಯಿಲೆಯನ್ನು ಬೇಗ ಪತ್ತೆ ಹಚ್ಚಿದಲ್ಲಿ ಸೂಕ್ತವಾದ ಚಿಕಿತ್ಸೆಯನ್ನು ನೀಡಿ ಗುಣಪಡಿಸಬಹುದು ಹಾಗೂ ಅಪಾಯದ ತೀವ್ರತೆಯನ್ನು ಕಡಿಮೆ ಮಾಡಬಹುದು,ಸಾರ್ವಜನಿಕರು ಯಾವುದೇ ರೋಗದ ಲಕ್ಷಣಗಳು ಕಂಡ ತಕ್ಷಣ ನಿರ್ಲಕ್ಷ್ಯ ಮಾಡದೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ ,ರೋಗ ಉಲ್ಬಣಗೊಂಡಗ ಪರಿಣಾಮಕಾರಿ ಚಿಕಿತ್ಸೆ ಕೊಡಲು ಸಾಧ್ಯವಾಗುವುದಿಲ್ಲಎಂದು ತಿಳಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಕುಮಾರ್ ಮಾತನಾಡಿ ಕ್ಯಾನ್ಸರ್ ಕಾಯಿಲೆ ಪರೀಕ್ಷೆ ಹಾಗೂ ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಯಾದ ಜಿಲ್ಲಾ ಆಸ್ಪತ್ರೆ ಹಾಗೂ ಕಿದ್ವಾಯಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆಗಳು ದೊರೆಯುತ್ತಿವೆ ಅದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ//ವಿಜಯ್ ಕುಮಾರ್, ಹಾಗೂ ಶ್ರೀನಿವಾಸ್ ಮುಂತ್ತಾದವರು ಉಪಸ್ಥಿತರಿದರು

ವರದಿ :ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!