ತಿಪಟೂರು: ಏಪ್ರಿಲ್ 14ರಂದು ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು. ಉಪಚುನಾವಣೆ ಮುಗಿದ ನಂತರ ಒಳಮೀಸಲಾತಿ ಗೊಂದಲ ನಿವಾರಣೆಯಾಗುವ ಸಾಧ್ಯತೆ ಇದ್ದು, ಬಳಿಕ ಸಭೆ ನಡೆಸಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಸರ್ಕಾರದ ಶಿಷ್ಟಾಚಾರದಂತೆ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಸರ್ಕಾರದ ಶಿಷ್ಟಾಚಾರದಂತೆ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಜಯಂತಿಗಳನ್ನು ಆಚರಿಸುತ್ತಾ ಬಂದಿದ್ದೇವೆ. ನಮಗೆ ಇಬ್ಬರೂ ಮಹಾನ್ ನಾಯಕರು ಎರಡು ಕಣ್ಣುಗಳಂತೆ,ಇದುವರೆಗೆ ನಡೆದುಬಂದ ಸಂಪ್ರದಾಯದಂತೆ ಏಪ್ರಿಲ್ 14ರಂದು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸರಳವಾಗಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತದೆ. ಉಪಚುನಾವಣೆ ನಂತರ ಒಳಮೀಸಲಾತಿ ಗೊಂದಲ ಬಗೆಹರಿಯುವ ಸಾಧ್ಯತೆ ಇರುವುದರಿಂದ, ಪ್ರತ್ಯೇಕ ದಿನಾಂಕ ನಿಗದಿ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಡಾ. ಬಾಬು ಜಗಜೀವನ್ ರಾಮ್ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ

ಅದೇ ದಿನನಗರದಲ್ಲಿ ನಿರ್ಮಾಣವಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಡಾ. ಬಾಬು ಜಗಜೀವನ್ ರಾಮ್ ಭವನಗಳ ಲೋಕಾರ್ಪಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಎರಡೂ ಭವನಗಳಲ್ಲಿ ಒಂದೇ ಸ್ಥಳದಲ್ಲಿ ಜಯಂತಿ ಆಚರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಅದ್ದೂರಿ ಆಚರಣೆಯಲ್ಲಿ ಮೆರವಣಿಗೆ ಸೇರಿದಂತೆ ಸರ್ಕಾರದ ನಿಯಮಾನುಸಾರ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಸಭೆಯಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ, ಡಿವೈಎಸ್ಪಿ ಉಮೇಶ್, ತಹಸೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಹಾಗೂ ಸಮಾಜ ಕಲ್ಯಾಣಾಧಿಕಾರಿ ತ್ರಿವೇಣಿ ದಲಿತ ಮುಖಂಡರಾದ ಮಾದಾರ ಮಹಾಸಭಾ ಅಧ್ಯಕ್ಷ ಕೊಪ್ಪ ಶಾಂತಪ್ಪ .ಮಾಜಿ ಎಪಿಎಂಸಿ ಅಧ್ಯಕ್ಷ ಬಜಗೂರು ಮಂಜುನಾಥ್ .ಚಲವಾದಿ ಮಹಾಸಭಾ ಮುಖಂಡ ಕರಡಾಳು ಚಂದ್ರಶೇಖರ್. ದಲಿತ ಮುಖಂಡರಾದ ಕುಪ್ಪಾಳು ರಂಗಸ್ವಾಮಿ.ಪೆದ್ದಿಹಳ್ಳಿ ನರಸಿಂಹಯ್ಯ.ಕಂಚಾಘಟ್ಟ ಸುರೇಶ್ .ಡಿಎಸ್ಎಸ್ ಸಂಚಾಲಕ ರಾಘವೇಂದ್ರ ಯಗಚೀಕಟ್ಟೆ ಮತ್ತಿಘಟ್ಟ ಶಿವಕುಮಾರ್ ಹರೀಶ್ ಗೌಡ. ಗಾಮನಧಿನಗರ ಬಸವರಾಜು.ಹೊನ್ನಪ್ಪ.ಪ್ರಭುಸ್ವಾಮಿ .ಜಗದಾರ್ಯಸ್ವಾಮಿ.ಸೇರಿದಂತೆ ಅನೇಕರು ಉಪಸ್ಥಿತರಿದರು
ವರದಿ :ಮಂಜುನಾಥ್ ಹಾಲ್ಕುರಿಕೆ






