Spread the love

ತಿಪಟೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ವಾತಾವರಣದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಎಸ್ ಆರ್ ಎಸ್ ಕ್ರೋಮ್ ಪಿಯು ಕಾಲೇಜು, ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ಶ್ರೀ ಷಡಕ್ಷರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ರುದ್ರಮುನಿ ಸ್ವಾಮೀಜಿ ಹೇಳಿದರು.


ನಗರದ ಹೊರವಲಯದ ಕೋಟೆನಾಯಕನಹಳ್ಳಿಯ ಎಸ್.ಆರ್ ಎಸ್ ಕ್ರೋಮ್ ಪಿಯು ಕಾಲೇಜು ಆವರಣದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು
ಎಸ್ ಆರ್ ಎಸ್ ಕ್ರೋಮ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸೂಕ್ತವಾದ ನೈಸರ್ಗಿಕ ವಾತಾವರಣ ಹಾಗೂ ನುರಿತ, ಅನುಭವಿ ಶಿಕ್ಷಕರ ತಂಡವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬೆಂಗಳೂರಿನಂತಹ ಮಹಾನಗರಗಳ ವಿದ್ಯಾರ್ಥಿಗಳಿಗೆ ಸರಿಸಮಾನವಾಗಿ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದೊಂದಿಗೆ ಕಾಲೇಜು ಕಾರ್ಯನಿರ್ವಹಿಸುತ್ತಿದೆ ‌ಪ್ರತಿ ವರ್ಷ ಕ್ರೋಮ್ ಪಿಯು ಕಾಲೇಜು ಹಲವಾರು ರ್ಯಾಂಕ್ ಪಡೆಯುವ ಮೂಲಕ ಗ್ರಾಮೀಣ ಭಾಗದಲ್ಲಿ ಹೆಸರುಗಳಿಸಿದೆಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಿಶೇಷ ಗಣಪತಿ ಪೂಜೆ ಹಾಗೂ ಹೋಮ ನೆರವೇರಿಸಲಾಯಿತು.


ಕಾರ್ಯಕ್ರಮದಲ್ಲಿ ಕ್ರೋಮ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕೆ.ಟಿ ಸ್ವಾಮಿ ಎಸ್‌ಆರ್‌ಎಸ್ ಇಂಟರ್‌ನ್ಯಾಷನಲ್ ಸ್ಕೂಲ್ ಆಡಳಿತಾಧಿಕಾರಿ ಶ್ರೀಮತಿ ರಶ್ಮಿ ನಿರಂಜನ್, ಪಾಂಡುರಂಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ :ಮಂಜುನಾಥ್ ಹಾಲ್ಕುರಿಕೆ

error: Content is protected !!