
ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು, ಜಿಲ್ಲಾಪಂಚಾಯ್ತಿ ತುಮಕೂರು, ಜಿಲ್ಲಾಡಳಿತ ತುಮಕೂರು ಮಹಾನಗರಪಾಲಿಕೆ ತುಮಕೂರು ಸಹಯೋಗದಲ್ಲಿ ನಗರದ ಮಹತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಅದ್ದೂರಿಯಾಗಿ ನಡೆಯಿತು.

ಗೃಹಸಚಿವ ಜಿ.ಪರಮೇಶ್ವರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಿದರು
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು.
ಲೇಖನಿ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು.
ನಮ್ಮ ಜಿಲ್ಲೆಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಯ ಜವಾಬ್ದಾರಿಯನ್ನು ಕೊಟ್ಟಿದ್ದು, ಈ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ತುಮಕೂರಿನಲ್ಲಿ 58 ಕೋಟಿ ರೂ.ಖರ್ಚು ಮಾಡಿ ಸುಸಜ್ಜಿತವಾಗಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಅಥ್ಲೆಟಿಕ್, ಕಬ್ಬಡ್ಡಿ, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಜಿಲ್ಲೆಯ ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಕ್ರೀಡೆಗೆ ಪೆÇ್ರೀತ್ಸಾಹ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕ್ರೀಡೆಗಳನ್ನು ಪೆÇ್ರೀತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು.
ರಾಜ್ಯಮಟ್ಟದಲ್ಲಿ ಕ್ರೀಡಾಕೂಟ ಯಶಸ್ವಿಯಾಗಲಿ ನಡೆಯಲಿ ಎಂದು ಆಶಿಸಿದ ಅವರು, ಜನವರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಸಮ್ಮೇಳನವನ್ನು ಯಶಸ್ವಿಗೊಳಿಸಲು ಶ್ರಮ ವಹಿಸೋಣ ಎಂದರು.
.
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಮಾತನಾಡಿ ಪತ್ರಕರ್ತರ ಆರೋಗ್ಯ ರಕ್ಷಣೆ ಕಡೆ ಹೆಚ್ವು ಗಮನಕೊಡಬೇಕು, ಸದಾ ಒತ್ತಡದಲ್ಲಿ ಕೆಲಸ ಮಾಡುವ ನೀವೂ ದೈಹಿಕ ಮಾನಸಿಕ ಆರೋಗ್ಯಕ್ಕೆ ಒತ್ತುನೀಡಿ, ಕ್ರೀಡೆಗಳು ದೈಹಿಕ ಆರೋಗ್ಯ ರಕ್ಷಣೆ ಜೋತೆ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ರಾಜ್ಯಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ತುಮಕೂರು ಶಾಸಕ ಬಿ.ಜಿ ಜ್ಯೋತಿಗಣೇಶ್, ಚಿದನಂದಗೌಡ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು.ತುಮಕೂರು ಜಿಲ್ಲಾಧಿಕಾರಿ ಶುಭಾಕಲ್ಯಾಣ್. ಆಯುಕ್ತರಾದ ಶ್ರೀಮತಿ ಅಶ್ವೀಜ,ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ ಪುರುಷೋತ್ತಮ್ ,ಹಿರಿಯ ಪತ್ರಕರ್ತ ಪ್ರಜಾಪ್ರಗತಿ ನಾಗಣ್ಣ, ಗೃಹಸಚಿವರ ಕರ್ತವ್ಯಧಿಕಾರಿ ನಾಗಣ್ಣ ಮುಂತ್ತಾದವರು ಉಪಸ್ಥಿತರಿದರು
ವರದಿ : ಮಂಜುನಾಥ್ ಹಾಲ್ಕುರಿಕೆ