
ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಫೆಬ್ರವರಿ 13ರಿಂದ 16ರ ವರೆಗೆ ನಡೆಯುವ ರಾಷ್ಟ್ರೀಯ ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಡದ ಕ್ರೀಡಾಜ್ಯೋತಿ ರಥಯಾತ್ರೆಗೆ ಶಾಸಕ ಕೆ.ಷಡಕ್ಷರಿ ಚಾಲನೆ ನೀಡಿದರು
ನಗರದ ಕಲ್ಪತರು ಕ್ರೀಡಾಗಣದಲ್ಲಿ ಆಯೋಜಿಸಿದ ಕ್ರೀಡಾಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಕೆ.ಷಡಕ್ಷರಿ ಮಾತನಾಡಿ ತಿಪಟೂರಿನಲ್ಲಿಫೆಬ್ರವರಿ 13 ರಿಂದ 16 ರವರೆಗೆ ರಾಷ್ಟ್ರೀಯ ಪುರುಷ ಹಾಗೂ ಮಹಿಳೆಯರ,ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಟ ನಡೆಯಲ್ಲಿದೆ, , ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ತಂಡಗಳು ಭಾಗವಹಿಸಲಿದ್ದು, ಸ್ಪಂದನಾ ಕ್ರೀಡಾಮತ್ತು ಸಾಂಸ್ಕೃತಿಕ ಸಂಘ ಆಯೋಜಿಸಿರುವ ಕಾರ್ಯಕ್ರಮ ಆಯೋಜನೆ ಮಾಡಿರುವ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು,ರಾಷ್ಟ್ರೀ ಮಟ್ಟದ ಪ್ರತಿಷ್ಠಿತ ಆಟಗಾರರು, ಭಾಗವಹಿಸುವ ಕ್ರೀಡಾಕೂಟದಲ್ಲಿ ಕ್ರೀಡಾಸಕ್ತರಿಗೆ ರಸದೌತಣ ನೀಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟಡ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸ್ಪಂದನಾ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಮುಖಂಡ ನವೀನ್ ಮಾತನಾಡಿ ಫೆಬ್ರವರಿ 13ರಿಂದ 16 ರವರೆಗೆ,ರಾಷ್ಟ್ರೀಯ ಪುರುಷ ಹಾಗೂ ಮಹಿಳೆಯರ ಬಾಲಿಬಾಲ್ ಪಂದ್ಯಾವಳಿ ನಡೆಯಲ್ಲಿದು,ರಾಷ್ಟ್ರಮಟ್ಟದ ಪ್ರತಿಷ್ಠಿತ ತಂಡಗಳು ಭಾಗವಹಿಸುವ ಕ್ರೀಡಾಕೂಟದಲ್ಲಿ ಫೆಬ್ರವರಿ 13 ರಂದು ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಕ್ರೀಡಾಜ್ಯೋತಿ ಸ್ವೀಕರಿಸಲ್ಲಿದ್ದು, ಶಾಸಕ ಕೆ.ಷಡಾಕ್ಷರಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ,14ಮತ್ತು 15 ರಂದು ಕ್ರೀಡಾಪಟುಗಳಿಗೆ ಸನ್ಮಾನ ಹಾಗೂ 16ರಂದು ಸಮಾರೋಪಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲ್ಲಿದ್ದು, ಕಾರ್ಯಕ್ರಮಕ್ಕೆ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ,ಬಿ.ನಂಜಾಮರಿ, ನಿವೃತ್ತ ಎಸಿಪಿ ಲೋಕೇಶ್ವರ್,ಸೇರಿದಂತೆ ರಾಜ್ಯದ ಅನೇಕ ರಾಜಕೀಯ ನಾಯಕರು, ಕ್ರೀಡಾಪಟುಗಳು,ಅಧಿಕಾರಿ ವರ್ಗ ಭಾಗವಹಿಸುವ ಕ್ರೀಡಾಕೂಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ನಿಜಗುಣ,ತೋಂಟಾರಾಧ್ಯ. ಮಾದಿಹಳ್ಳಿ ರೇಣು, ಉಮಾಶಂಕರ್ ಮುಂತ್ತಾದವರು ಉಪಸ್ಥಿತರಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ