
ಕರಡಿ ಕೋಡಿಬಳಿ ಬಸ್ ಮತ್ತು ಬೈಕ್ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ ಶೆಟ್ಟಿಹಳ್ಳಿ ಅಭಿನಾಶ್ ಎಂದು
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕರಡಿ ಕೋಡಿಯಲ್ಲಿ ಬೈಕ್ ಗೆ ಕೆ.ಎಸ್ .ಆರ್.ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಧಾರುಣ ಘಟನೆ ನಡೆದಿದ್ದು

ತಿಪಟೂರು ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ವಾಸಿ 17 ವರ್ಷದ ಅವಿನಾಶ್ ಮೃತ ದುರ್ದೈವಿ.

ನಿರ್ಮಾಣ ಹಂತದ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸುರಕ್ಷತಾ ನಿಯಮಗಳನ್ನ ಪಾಲನೆ ಮಾಡಿಲ್ಲ. ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜಾವಾಬ್ದಾರಿಯಿಂದ ಕರಡಿ ಗ್ರಾಮ ಹಾಗೂ ಕರಡಿ ಕೋಡಿಯಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದ್ದು,ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತವಾಗಿದ್ದು ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಹೆದ್ದಾರಿ ಕಾಮಗಾರಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳ ಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಕೆ.ಬಿ ಕ್ರಾಸ್ ಪೊಲೀಸರು ಭೇಟಿ ನೀಡಿದ್ದು ಪ್ಎಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ
ವರದಿ :ಮಂಜುನಾಥ್ ಹಾಲ್ಕುರಿಕೆ