ಯುಗಾಧಿ ಹಬ್ಬದಲ್ಲಿ ಇಸ್ಪೀಟ್ ನಿಷೇಧ :ಕಠಿಣ ಕ್ರಮದ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Spread the love

ದಿನಾಂಕ: 30-03-2025 ನಡೆಯುವ ಯುಗಾದಿ ಹಬ್ಬದಆಚರಣೆ ಸಮಯದಲ್ಲಿ ಕಲ್ಯಾಣ ಮಂಟಪ, ಹೋಟೆಲ್, ವಸತಿ ಗೃಹಗಳು, ಮನೆ, ತೋಟದ ಮನೆಗಳು,ರಸ್ತೆಯ ಬದಿಗಳಲ್ಲಿ ಟೆಂಟ್ ನಿರ್ಮಿಸಿಕೊಂಡು ಜೂಜಾಡುವುದನ್ನು ನಿಷೇದಿಸಲಾಗಿದೆ.

ಇಂದಿನಿಂದ ಈ
ಸಂಬಂಧ ಯಾವುದೇ ರೀತಿಯ ಜೂಜಾಟ ಕಂಡುಬಂದಲ್ಲಿ ಅವರ ಮೇಲೆ ಕಠಿಣ ಕಾನೂನು ಕ್ರಮ
ಜರುಗಿಸಲಾಗುತ್ತದೆ. ಹಾಗೂ ಇದಕ್ಕೆ ಪ್ರೋತ್ಸಾಹಿಸಿದ ಸ್ಥಳದ ಮಾಲೀಕರು/ಮಧ್ಯವರ್ತಿಗಳ ಮೇಲು ಕಾನೂನು
ರೀತಿ ಕ್ರಮ ಜರುಗಿಸಲಾಗುವುದು, ಮತ್ತು ಇದಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರಆಸ್ತಿಗಳನ್ನು ಮುಟ್ಟುಗೋಲು
ಹಾಕಿಕೊಳ್ಳಲಾಗುತ್ತದೆ. ಹಾಗೂ ಅಕ್ರಮ ಜೂಜಾಟದಲ್ಲಿ ತೊಡಗುವವರ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ
ಕ್ರಮ ಜರುಗಿಸಲಾಗುವುದು.
ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಜೂಜಾಟದಲ್ಲಿ ತೊಡಗುವುದಾಗಲಿ ಅದಕ್ಕೆ
ಅವಕಾಶ ಮಾಡಿಕೊಡುವುದಾಗಲಿ ಪ್ರೋತ್ಸಾಹ ಕೊಡುವುದಾಗಲಿ ಮಾಡಬಾರದಾಗಿ ತುಮಕೂರು ಜಿಲ್ಲಾ ಪೊಲೀಸ್ ಕಛೇರಿ
ತುಮಕೂರು ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!