
ತುಮಕೂರು ಜಿಲ್ಲೆ ತಿಪಟೂರು ತಾಲ್ಲೋಕಿನ ಪ್ರಸಿದ್ದ ಯಾತ್ರಾಕ್ಷೇತ್ರ ಕಲ್ಪತರು ನಾಡಿನ ಶಕ್ತಿಪೀಠ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಹೋಮ , ದೀಪಾರಾಧನೆ,ಪ್ರಾಕಾರೋತ್ಸವ ನೆರವೇರಿಸಲಾಯಿತು.

ಆದಿಚುಂಚನಗಿರಿ ದಸರೀಘಟ್ಟ ಶಾಖಾಮಠದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಶ್ರೀ ಚೌಡೇಶ್ವರಿ ದೇವಿ ಹಾಗೂ ಶ್ರೀ ಕರಿಯಮ್ಮ ದೇವಿಯವರಿಗೆ ವಿಶೇಷ ಅಲಂಕಾರ ಹಾಗೂ ದೀಪಾರಾಧನೆ ನೆರವೇರಿಸಿದರು.ಯುಗಾದಿ ಹಬ್ಬದ ಅಂಗವಾಗಿ ಸಾವಿರಾರು ಜನಭಕ್ತಾಧಿಗಳು ದೇವಾಲಯಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ


