
ತಿಪಟೂರು ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ//ಬಿ.ಆರ್ ಅಂಬೇಡ್ಕರ್ ಹಾಗೂ ಭಾರತದ ಉಪಪ್ರಧಾನಿ,ಹಸಿರುಕ್ರಾಂತಿ ಹರಿಕಾರ ಡಾ//ಜಗಜೀವನ್ ರಾಮ್ ಜಯಂತಿ ಅಂಗವಾಗಿ ನಡೆದ ಅದ್ದೂರಿ ಮೆರವಣಿಗೆಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷರಾದ ಕೆ.ಷಡಕ್ಷರಿ ಸಂವಿಧಾನ ಶಿಲ್ಪಿ ಡಾ//ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ ಪೂಜೆಸಲ್ಲಿಸುವ ಮೂಲಕ ಚಾಲನೆ ನೀಡಿದರು

ತಮಟೆವಾದ್ಯ, ನಾಸಿಕ್ ಡೋಲ್, ಚಿಟ್ಟಿಮೇಳ ವಾದ್ಯ,ಕಹಳೆ,ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ, ಪೂರ್ಣಕುಂಭ ಮೆರವಣಿಗೆಯೊಂದಿಗೆ ಕೋಡಿ ಸರ್ಕಲ್ ಮೂಲಕ .ದೊಡ್ಡಪೇಟೆ, ಬಿ.ಹೆಚ್ ರಸ್ತೆ ಮೂಲಕ ಸಾಗಿ ನಗರಸಭೆ ಆವರಣದ ವರೆಗೆ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಶಾಸಕ ಕೆ.ಷಡಕ್ಷರಿ ತಿಪಟೂರು ಉಪವಿಭಾಗಾಧಿಕಾರಿ ಶ್ರೀಮತಿ ಸಪ್ತಶ್ರೀ,ಇಒ ಸುದರ್ಶನ್.ತಹಸೀಲ್ದಾರ್ ಪವನ್ ಕುಮಾರ್ ,ಸಮಾಜಕಲ್ಯಾಣಧಿಕಾರಿ ಶ್ರೀಮತಿ ತ್ರಿವೇಣಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಯಮುನಾಧರಣೇಶ್,ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ,ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಮುಖಂಡರು ಉಪಸ್ಥಿತರಿದರು.