
ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಸಂಪಿಗೆ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸದರಿ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಿಗೆ ಭವ್ಯವಾದ ಅಲಂಕಾರ ಮಾಡಲಾಗಿತ್ತು ಹಾಗೂ ಧಾರ್ಮಿಕ ವಿಧಿ ವಿಧಾನಗಳಿಂದ ಚೌಡೇಶ್ವರಿ ದೇವಿಯ ಜಯಂತಿ ಮಹೋತ್ಸವವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸದರಿ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ರಮಗಳಾದ ಕಲ್ಯಾಣ ಮಂಟಪ, ಸಮುದಾಯ ಭವನ, ಸ್ನಾನದ ಗೃಹಗಳ ಅಭಿವೃದ್ಧಿ ಕಾರ್ಯ ಕ್ರಮಗಳಿಗೆ ಚಾಲನೆ ನೀಡಲಾಯಿತು. ಸದರಿ ಧಾರ್ಮಿಕ ಕಾರ್ಯಕ್ರಮಕ್ಕೆ ಶ್ರೀ ಚೌಡೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಹಿರಿಯರು, ಮುಖಂಡರು ಹಾಗೂ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮದ ನೂರಾರು ಭಕ್ತಾದಿಗಳು ಸದರಿ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಿಯಿಂದ ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ಸಮಿತಯ ಸದಸ್ಯರಿಗೆ, ಹಿರಿಯರಿಗೆ ಹಾಗೂ ಗ್ರಾಮದ ಮುಖಂಡರಿಗೆ ಸನ್ಮಾನಿಸಲಾಯಿತು.
ವರದಿ: ದೀಪಕ್ ಬಿ ಆರ್. ಗುಬ್ಬಿ











Leave a Reply