
ತುರುವೇಕೆರೆ: ತಾಲ್ಲೂಕಿನ ವಡನಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಸದರಿ ಪಂಚಾಯಿತಿ ಮತ್ತು ಕಂದಾಯ ಇಲಾಖೆಯ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು ಸದರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು ವೃದ್ಧಾಪ್ಯ ಯೋಜನೆಯ ಅನುಕೂಲ ಪಡೆಯಲು ಸಂಬಂಧ ಪಟ್ಟ ನಾಡಕಛೇರಿಗೆ ಹೋಗಿಯೇ ಸದರಿ ಸೌಲಭ್ಯ ಪಡೆಯಲು ಸಾಧ್ಯವಾಗದ ವಯೋ ವೃದ್ಧರು ಇಂತಹ ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ದಬ್ಬೇಘಟ್ಟ ಹೋಬಳಿಯ ಉಪ ತಹಶೀಲ್ದಾರ್ ಮಾತನಾಡಿ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯಲು ನಾಡ ಕಛೇರಿಕೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಫಲಾನುಭವಿಗಳಿಗೆ ಇದು ಸಕಾಲ ಆಗಿದೆ ಇಂತಹ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಹೆಚ್ಚಿನ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಸದರಿ ಸೇವೆಯ ಅನುಕೂಲ ಪಡೆಯಲು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ವಿಳಂಬ ಮತ್ತು ಆಡಳಿತ ಸಮಸ್ಯೆಗಳ ಸುಧಾರಿಸಲು ಈ ಅದಾಲತ್ ಕಾರ್ಯಕ್ರಮ ಅಗತ್ಯವಾಗಿದೆ ಅಲ್ಲದೆ ಸಾಮಾಜಿಕ ಭದ್ರತಾ ಯೋಜನೆಗೆ ಸಂಬಂಧಿಸಿದ ಅರ್ಜಿಗಳ ತ್ವರಿತ ವಿಲೇವಾರಿಯ ಉದ್ದೇಶ ಹೊಂದಿದೆ ಎಂದು ತಿಳಿಸಿದರು.ಸದರಿ ಕಾರ್ಯಕ್ರಮದಲ್ಲಿ ವಡನಘಟ್ಟ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು , ದಬ್ಬೇಘಟ್ಟ ಹೋಬಳಿಯ ಉಪ ತಹಶೀಲ್ದಾರ್, ವಡನಘಟ್ಟ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಮತ್ತು ಸದರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು ಮತ್ತು ಅರ್ಹ ವೃದ್ಧಾಪ್ಯ ಯೋಜನೆಯ ಅರ್ಜಿದಾರರು ಮತ್ತು ಗ್ರಾಮಸ್ಥರು ಸೇರಿದ್ದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಅರ್ಜಿದಾರರಿಂದ ಸ್ಥಳದಲ್ಲೇ ಮನವಿಯನ್ನು ಕಂದಾಯ ಅಧಿಕಾರಿಗಳಿಂದ ಸ್ವೀಕರಿಸಲಾಯಿತು.
ವರದಿ: ಸಂತೋಷ್ ಓಬಳ. ಗುಬ್ಬಿ











Leave a Reply