74ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Spread the love

ಗುಬ್ಬಿ: ತಾಲೂಕಿನ ಕಡಬಾ ಹೋಬಳಿಯ ಮಾರುಶೆಟ್ಟಿಹಳ್ಳಿಯ ಗ್ರಾಮ ಪಂಚಾಯಿತಿಯಲ್ಲಿ 79ನೇ ಭಾರತೀಯ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು, ಸದರಿ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀ ಗಂಗಮ್ಮ ನಾಗೇಶ್ ನಮ್ಮ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಮತ್ತು ಸದಸ್ಯರ ಸಹಕಾರದಿಂದ ಆಚರಿಸುತ್ತಿದ್ದೇವೆ ಹಾಗೂ ಈ ವರ್ಷದ ಸ್ವಾತಂತ್ರ ದಿನಾಚರಣೆಯ ವಿಶೇಷವಾಗಿ ಪಂಚಾಯಿತಿಗೆ ಒಳಪಡುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಊಟದ ತಟ್ಟೆ ಮತ್ತು ಲೋಟ ಹಾಗೂ ಕುಕ್ಕರ್ ಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಎಸ್ ಭಾಸ್ಕರ್ ರವರು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದದ ಫಲವಾಗಿ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ನಮ್ಮ ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಮತ್ತು ಸದಸ್ಯರ ಸಹಕಾರದಿಂದ ಯಶಸ್ವಿಯಾಗಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು ಎಂದರು. ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ ನಾಗೇಶ್, ಪಂಚಾಯಿತಿ ಸದಸ್ಯರುಗಳಾದ ನಟರಾಜು( ಹೋರಾಟಗಾರರು), ಚಂದ್ರಪ್ಪ, ತಿಮ್ಮರಾಜು, ಹಾಗೂ ಅತಿಥಿಗಳಾಗಿ ಶ್ರೀ ನಾಗೇಶ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಎಸ್ ಭಾಸ್ಕರ್ ಮತ್ತು ಪಂಚಾಯಿತಿ ಗ್ರಂಥಪಾಲಕ ಹಾಗೂ ಅರಿವು ಕೇಂದ್ರದ ತಾಲ್ಲೂಕು ಅಧ್ಯಕ್ಷರಾದ ಶ್ರೀ ಶಿವಣ್ಣ, ಪಂಚಾಯಿತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ: ಸಂತೋಷ್ ಓಬಳ. ಗುಬ್ಬಿ

Leave a Reply

Your email address will not be published. Required fields are marked *

error: Content is protected !!