ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು, ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ನಾಗೇಶ್ ಗಾಂಧೀಜಿಯವರು ತಮ್ಮ ಜೀವನವನ್ನೇ ರಾಷ್ಟ್ರಕ್ಕಾಗಿ ಮುಡುಪಿಟ್ಟು ರಾಷ್ಟ್ರಪಿತಿರಾದರು ಹಾಗೂ ರಾಮರಾಜ್ಯದ ಕನಸಿನಲ್ಲಿ ನವ ಭಾರತದ ನಿರ್ಮಾಣ ಗುರಿ ಹೊಂದಿದ್ದರು, ನಮ್ಮ ಗಾಂಧೀಜಿಯವರ ಆಶಯಗಳನ್ನು ಮತ್ತು ದೇಶಕ್ಕೆ ನೀಡಿದ ಸೇವೆಗಳನ್ನ ಸ್ಮರಿಸಿ ಭವ್ಯ ಭಾರತದ ಭವಿಷ್ಯಕ್ಕೆ ಇಂದು ನಾವು ಬುನಾದಿ ಆಕಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ನಾಗೇಶ್, ಅತಿಥಿಗಳಾದ ಶ್ರೀ ನಾಗೇಶ್, ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಕಾರ್ಯದರ್ಶಿ ಹಾಗೂ ಪಂಚಾಯಿತಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಸಂತೋಷ್ ಓಬಳ. ಗುಬ್ಬಿ











Leave a Reply