ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಸಂಪಿಗೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ಅಂಗವಾಗಿ ಗೌರವ ಸಲ್ಲಿಸಲಾಯಿತು. ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶಿವಲಿಂಗ ಮೂರ್ತಿ ಹೆಚ್ ಎಸ್ ನಾವು ಮಹಾತ್ಮ ಗಾಂಧೀಜಿಯವರ ಶ್ರೇಷ್ಠ ಬದುಕನ್ನು ನಮ್ಮ ಬದುಕಿಗೆ ಅಳವಡಿಸಿಕೊಂಡು ಬೆಳೆಯಬೇಕಿದೆ ಅಲ್ಲದೆ ಬಾಪೂಜಿಯವರು “ನನ್ನ ಜೀವನವೇ ನನ್ನ ಸಂದೇಶ” ಎಂದು ಸಾರಿದ್ದಾರೆ. ಅಂತೆಯೇ ನಮ್ಮ ಜೀವನವು ಸಂದೇಶ ಸಾರುವ ರೀತಿ ನಮ್ಮ ಜೀವನವನ್ನು ಒಳ್ಳೆಯ ನಡತೆಯಿಂದ ಸಾರ್ಥಕ ಸಾರ್ಥಕಗೊಳಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಶಿವಲಿಂಗ ಮೂರ್ತಿ ಎಚ್ ಎಸ್, ಪಂಚಾಯತಿಯ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತಿಯ ಕಾರ್ಯದರ್ಶಿಗಳಾದ ಶ್ರೀ ಗಂಗಾಧರ್, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಸಂತೋಷ್ ಓಬಳ. ಗುಬ್ಬಿ











Leave a Reply