ತುರುವೇಕೆರೆ: ತಾಲೂಕಿನ ದಂಡಿನಶಿವರ ಹೋಬಳಿಯ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮ ದಿನದ ಅಂಗವಾಗಿ ಗೌರವ ಸಲ್ಲಿಸಲಾಯಿತು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಹದೇವಮ್ಮ ನಮ್ಮ ಮಹಾತ್ಮ ಗಾಂಧೀಜಿಯವರು ಅಂದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯನ್ನು ವಹಿಸಿ ನಮಗೆ ಸ್ವಾತಂತ್ರ್ಯವನ್ನು ದೊರಕಿಸಿ ಕೊಟ್ಟ ಸಂಗತಿಯನ್ನು ನಾವು ಎಂದೆಂದೂ ಸ್ಮರಿಸಬೇಕಿದೆ ಆದರೆ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿಯವರ ಬಗ್ಗೆ ತಪ್ಪು ತಿಳುವಳಿಕೆಗಳನ್ನು ಹರಡಲಾಗುತ್ತಿದೆ ಬದಲಾಗಿ ಗಾಂಧೀಜಿಯವರ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಅವರ ಬದುಕು ಮತ್ತು ಹೋರಾಟದ ಚಿಂತನೆಗಳನ್ನು ಅರಿತುಕೊಳ್ಳಬೇಕು ಹಾಗೂ ಅವರಲ್ಲಿರುವ ನಾಯಕತ್ವ ಗುಣಗಳನ್ನು ಇಂದಿನ ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಹದೇವಮ್ಮ ಪಂಚಾಯತಿಯ ಸರ್ವ ಸದಸ್ಯರುಗಳು ಪಂಚಾಯಿತಿ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಸಂತೋಷ್ ಓಬಳ. ಗುಬ್ಬಿ











Leave a Reply