ತಿಪಟೂರು: ಜಲಸಂಪನ್ಮೂಲ ಇಲಾಖೆ ,ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ತಾಲ್ಲೋಕಿನ ಕರಡಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ನ್ಯಾಕೇನಹಳ್ಳಿ ಸೇರಿದಂತೆ 4.80 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.

ತಾಲ್ಲೋಕಿನ ಕರಡಿ ಗ್ರಾಮದಿಂದ ನ್ಯಾಕೇನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2ಕೋಟಿ 45 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಹಾಗೂ ಶಿಡ್ಲೆಹಳ್ಳಿಯಿಂದ ಅಣ್ಣಾಮಲ್ಲೇನಹಳ್ಳಿ ಮೂಲಕ ಚಿಕ್ಕನಾಯ್ಕನಹಳ್ಳಿ ರಸ್ತೆಗೆ ಸಂಪರ್ಕ ಕಲ್ಪಿಸುವ 1ಕೋಟಿ ವೆಚ್ಚದ ರಸ್ತೆ ಕಾಮಗಾರಿ,ಶಿಡ್ಲೆಹಳ್ಳಿ-ಅಣ್ಣಾಮಲ್ಲೇನಹಳ್ಳಿ ರಸ್ತೆಯಿಂದ ನ್ಯಾಕೇನಹಳ್ಳಿ ರಸ್ತೆಗೆ ಸಂಪರ್ಕಿಸುವ 85ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು
ನ್ಯಾಕೇನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಕರಡಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಮುಖ್ಯರಸ್ತೆಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ.ಎಂದ ಅವರು ಪಂಚಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗುತ್ತಿದ್ದು, ಪಡಿತರ ಧಾನ್ಯವಿತರಣೆಯಲ್ಲಿ 5ಕೆ.ಜಿ ಅಕ್ಕಿಯ ಜೊತೆಗೆ ಒಂದು ಕೆ.ಜಿ ಅಡುಗೆ ಎಣ್ಣೆ,ಬೇಳೆ,ಹಾಗೂ ಉಪ್ಪು,ಸಕ್ಕರೆ ವಿತರಣೆಗೆ ಕ್ರಮವಹಿಸಲಾಗುತ್ತಿದೆ.ಇದರಿಂದ ಸಾರ್ವಜನಿಕರಿಗೆ ಹೆಚ್ಚು ಉಪಯೋಗವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೋಕು ಪಂಚಾಯ್ತಿ ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್.ಹರ್ಷ.ಮಾಹಲಿಂಗಯ್ಯ,ವಿಶ್ವೇಶ್ವರಯ್ಯ ಜಲ ನಿಗಮದ ಎಇಇ ಚಂದ್ರಶೇಖರ್.ಸಣ್ಣ ನೀರಾವರಿ ಇಲಾಖೆ ಎಇಇ ದೊಡ್ಡಯ್ಯ.ಕರಡಿ ಗ್ರಾಮಪಂಚಾಯ್ತಿ ಪಿಡಿಓ ಕವಿತ.ಗುತ್ತಿಗೆದಾರ ಹಿಂಡಿಸ್ಕೆರೆ ಮಂಜುನಾಥ್ ಮುಂತ್ತಾದವರು ಉಪಸ್ಥಿತರಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ





