Spread the love

ತಿಪಟೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ತಿಪಟೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.


ನಗರಸಭಾ ವೃತ್ತದಲ್ಲಿ ನಡೆದ ವಿಜಯೋತ್ಸವದಲ್ಲಿ ಬಿಜೆಪಿ ಕಾರ್ಯಕರ್ತರು ಜಯಘೋಷ ಕೂಗಿ ಸಂಭ್ರಮಿಸಿದರು.
ಬಿಜೆಪಿ ಯುವ ಮುಖಂಡ ವಿಶ್ವದೀಪ್ ಬಿ.ಸಿ. ನಾಗೇಶ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿಜಯದ ಹಿಂದೆ ಸಾವಿರಾರು ಕಾರ್ಯಕರ್ತರ ತ್ಯಾಗ ಮತ್ತು ಬಲಿದಾನ ಅಡಗಿದೆ. ಹಗಲಿರುಳು ಶ್ರಮಿಸಿದ ಕಾರ್ಯಕರ್ತರ ಪರಿಶ್ರಮವೇ ಈ ಅಭೂತಪೂರ್ವ ಜಯಕ್ಕೆ ಕಾರಣವಾಗಿದೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ ಸೇರಿದಂತೆ ರಾಷ್ಟ್ರೀಯ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸುವುದ್ದಾಗಿ ತಿಳಿಸಿದ ಅವರು. ಪಶ್ಚಿಮ ಬಂಗಾಳದ ಈ ವಿಜಯವು ದೇಶದಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ .ವಲಸಿಗರ ಉಪಟಳದಿಂದ ಸಾವಿರಾರು ಹಿಂದುಗಳು ದೌರ್ಜನ್ಯಕ್ಕೆ ಒಳಗಾಗಿದರು .ಈ ಫಲಿತಾಂಶ ಕಾರ್ಯಕರ್ತರ ಶ್ರಮಕ್ಕೆ ಪ್ರತಿಫಲವಾಗಿ ದೊರೆತ್ತಿದ್ದುಅದೇ ರೀತಿ ಅಸ್ಸಾಂ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರ ಹಿಡಿದಿದ್ದು. ಕೇರಳ ತಮಿಳುನಾಡಿನಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.


ಬಿಜೆಪಿ ಮುಖಂಡ ಪ್ರಸನ್ನ ಕುಮಾರ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಷದ ಸಂಘಟನೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು ಎಂಬ ಸಂದೇಶವನ್ನು ಈ ಫಲಿತಾಂಶ ನೀಡಿದೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ಬಿಜೆಪಿ ನಗರಾಧ್ಯಕ್ಷ ಜಗದೀಶ್, ನಿಕಟ ಪೂರ್ವ ಅಧ್ಯಕ್ಷ ಬಳ್ಳೆಕಟ್ಟೆ ಸುರೇಶ್, ನಗರಸಭೆ ಮಾಜಿ ಸದಸ್ಯರಾದ ರಾಮ್ ಮೋಹನ್, ಶಶಿಕಿರಣ್, ಜಗಜ್ಯೋತಿ ಲಿಂಗರಾಜು, ಮುಖಂಡರಾದ ಬಿಸ್ಲೇಹಳ್ಳಿ ಜಗದೀಶ್, ಗುಲಾಬಿ ಸುರೇಶ್, ಹರ್ಷವರ್ಧನ್, ಶ್ರೀಕಂಠ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ:ಮಂಜುನಾಥ್ ಹಾಲ್ಕುರಿಕೆ

error: Content is protected !!