ತಿಪಟೂರು: ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿಧಿವಶರಾದ ಹಿನ್ನೆಲೆಯಲ್ಲಿ, ಅವರ ನಿವಾಸಕ್ಕೆ ಕೇಂದ್ರ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಬಿ.ಸಿ. ನಾಗೇಶ್ ಅವರೊಂದಿಗಿನ ತಮ್ಮ ಆತ್ಮೀಯತೆ ಹಾಗೂ ವಿಶ್ವಾಸವನ್ನು ಸ್ಮರಿಸಿದ ಎಚ್.ಡಿ. ಕುಮಾರಸ್ವಾಮಿ, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಹಲವು ಉತ್ತಮ ಕಾರ್ಯಗಳನ್ನು ಕೈಗೊಂಡಿದ್ದರು. ಅವರು ಅಜಾತಶತ್ರು, ಸರಳ ಹಾಗೂ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಉತ್ತಮ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಿರುವುದು ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಬಿ.ಸಿ. ನಾಗೇಶ್ ಅವರ ಧರ್ಮಪತ್ನಿ ವೀಣಾ ನಾಗೇಶ್, ಪುತ್ರ ಹಾಗೂ ಬಿಜೆಪಿ ಯುವ ಮುಖಂಡ ವಿಶ್ವದೀಪ್ ನಾಗೇಶ್, ತುರವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್, ಜಕ್ಕನಹಳ್ಳಿ ಲಿಂಗರಾಜು ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ :ಮಂಜುನಾಥ್ ಹಾಲ್ಕುರಿಕೆ





