Spread the love

ತಿಪಟೂರು: ಕೆಪಿಸಿಸಿ ಸದಸ್ಯ ವಿ.ಯೋಗೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ವಿ.ಯೋಗೇಶ್ ಗೆಳೆಯರ ಬಳಗ ಹಾಗೂ ಅಭಿಮಾನಿಗಳ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಲಾಯಿತು.

ಬರಗಾಲದ ಹಿನ್ನೆಲೆಯಲ್ಲಿ ವಿ.ಯೋಗೇಶ್ ಅವರು ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅದ್ದೂರಿ ಆಚರಣೆಯಿಂದ ದೂರ ಉಳಿದು, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

ಸಾರ್ವಜನಿಕ ಆಸ್ಪತ್ರೆಯ ಬಡ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು. ನಗರದ ಯಶಸ್ವಿನಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ಅಭಿಮಾನಿಗಳು ಅಲ್ಲಿನ ವೃದ್ಧರಿಗೆ ಹಾಲು, ಹಣ್ಣು ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಲ್ಲದೆ, ನಿರ್ಗತಿಕರಿಗೆ ಬೆಡ್‌ಶೀಟ್ ಹಾಗೂ ಆಹಾರ ಸಾಮಗ್ರಿಗಳನ್ನು ವಿತರಿಸಿ, ವಿ.ಯೋಗೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಧರ್, ಕಾಂತರಾಜು, ಕೃಷ್ಣಮೂರ್ತಿ, ವೆಂಕಟೇಶ್, ರಾಜು, ಮೂರ್ತಿ, ಸಿದ್ದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಮಂಜುನಾಥ್ ಹಾಲ್ಕುರಿಕೆ

error: Content is protected !!