ತಿಪಟೂರು: ರಾಷ್ಟ್ರೀಯ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರವರ ಜನ್ಮದಿನದ ಅಂಗವಾಗಿ ತಿಪಟೂರು ಯುವ ಕಾಂಗ್ರೆಸ್ ವತಿಯಿಂದ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜ್ ಮಾರ್ಗದರ್ಶನದಲ್ಲಿ, ನಗರದ ಬಿಇಓ ಕಚೇರಿ ಹಿಂಭಾಗದ ಜಿ.ಎಚ್. ಪಿ.ಎಸ್ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ಮತ್ತು ಸಿಹಿ ವಿತರಿಸುವುದರ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ತಿಪಟೂರು ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಯತೀoದ್ರ, ಗ್ರಾಮಾಂತರ ಅಧ್ಯಕ್ಷ ಮಂಜುನಾಥ್, ವಿಧಾನಸಭಾ ಅಧ್ಯಕ್ಷ ಶಶಿಕುಮಾರ್, ಜಿಲ್ಲಾ ಕಾರ್ಯದರ್ಶಿ ಭರತ್, ಪದಾಧಿಕಾರಿಗಳಾದ ಮಹಾಂತೇಶ್ ಪಟೇಲ್, ಲೋಕೇಶ್ ಮತ್ತು ಲಿಖಿತ್ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಯೂತ್ ಕಾಂಗ್ರೆಸ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ:ಮಂಜುನಾಥ್ ಹಾಲ್ಕುರಿಕೆ




