ತಿಪಟೂರು:ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ಬಳಿವೇಗವಾಗಿ ಬಂದ ಕೆ.ಎಸ್.ಆರ್.ಟಿ ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ನಾಗರಾಜು ಉರುಫ್ ರಾಜು 40ವರ್ಷ ಹುಚ್ಚನಹಟ್ಟಿ ವಾಸಿ ಹಾಲಿ ಹಾಲ್ಕುರಿಕೆ ವಾಸಿ ಮೃತ ದುರ್ದೈವಿ
ತಿಪಟೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಪ್ರದೀಪ್ ಹಾಗೂ ನಾಗರಾಜು ಬೈಕ್ ನಲ್ಲಿ ಬರುವಾಗ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೈಕ್ ಹಿಂಬದಿಯ ಸವಾರ ನಾಗರಾಜು ಸ್ಥಳದಲ್ಲೆ ಮೃತಪಟ್ಟಿದ್ದು,ಪ್ರದೀಪ್ ಗಾಯಗೊಂಡು ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ತಿಪಟೂರು ನಗರಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.ಕೆ.ಎಸ್ ಆರ್ ಟಿ ಸಿ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ:ಮಂಜುನಾಥ್ ಹಾಲ್ಕುರಿಕೆ






