Spread the love

ಗುಬ್ಬಿ: ತಾಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿಯಲ್ಲಿ 79ನೇ ಭಾರತೀಯ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು ಸದರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಲತಾ ದಯಾನಂದ್ ರವರು ಸದರಿ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ನಮ್ಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಮತ್ತು ಸದಸ್ಯರ ಸಹಕಾರದಿಂದ ಆಚರಿಸುತ್ತಿದ್ದೇವೆ ನಮ್ಮ ಸ್ವಾತಂತ್ರ ಹೋರಾಟಗಾರರು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಲು ಅವರ ಅವಿರತ ಹೋರಾಟದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ನಮ್ಮ ಯುವ ಜನತೆಯ ನಮ್ಮ ರಾಷ್ಟ್ರ ನಾಯಕರು ಹಾಕಿಕೊಟ್ಟ ಹಾದಿಯಲ್ಲಿ ಸಾಗಬೇಕಾಗಿದೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಮ್ಮ ಗ್ರಾಮ ಪಂಚಾಯಿತಿಗೆ ಒಳಪಡುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಶುದ್ಧೀಕರಣ ಯಂತ್ರಗಳನ್ನು ಉಚಿತವಾಗಿ ವಿತರಿಸಿದವು ಎಂದರು, ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಶ್ರೀ ನಾಗೇಂದ್ರ ರವರು ಮಾತನಾಡಿ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ದೊರಕಿಸಿದ ಸ್ವಾತಂತ್ರವನ್ನು ಸಮಾಜದ ಸರ್ವತೋಮುಖ ಏಳಿಗೆಗೆ ಬಳಸಿಕೊಳ್ಳಬೇಕು ಆ ನಿಟ್ಟಿನಲ್ಲಿ ನಮ್ಮ ಗ್ರಾಮ ಪಂಚಾಯಿತಿ ಸಾಗುತ್ತಿದೆ ಹಾಗೂ ಪಂಚಾಯತಿಯ ಎಲ್ಲಾ ಸಿಬ್ಬಂದಿ ಮತ್ತು ಸದಸ್ಯರ ಸಹಕಾರದಿಂದ ಸ್ವಾತಂತ್ರ ದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಬಿ ಜಿ ಲತಾ ದಯಾನಂದ್, ಉಪಾಧ್ಯಕ್ಷರಾದ ಶ್ರೀ ರಾಜಶೇಖರ್ ಎನ್ ವಿ ಹಾಗೂ ಪಂಚಾಯಿತಿ ಸರ್ವ ಸದಸ್ಯರು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ನಾಗೇಂದ್ರರವರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.

ವರದಿ: ಸಂತೋಷ್ ಓಬಳ. ಗುಬ್ಬಿ

error: Content is protected !!