ತಿಪಟೂರು:ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘ ತಿಪಟೂರು ವತಿಯಿಂದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಆಯೋಜನೆ ಮಾಡಲಾಗಿದೆ

ನಗರದ ಶ್ರೀ ಜಯದೇವಾಶ್ರೀ ಗುರುಕುಲಾನಂದಾಶ್ರಮದಲ್ಲಿ ಆಯೋಜಿಸಿದ ಪತ್ರಿಕಾ ಘೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವೀರಶೈವಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘ ತಿಪಟೂರು ಅಧ್ಯಕ್ಷ ಕೆ.ಎಸ್. ಎಂ.ಸ್ವಾಮಿ ಮಾತನಾಡಿ ಪ್ರತಿವರ್ಷದಂತೆ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ದಿಂದ ಅಕ್ಟೋಬರ್ 19 ರಂದು ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯಿತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನ ಆಯೋಜನೆ ಮಾಡಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ಶ್ರೀಮದ್ ರಂಬಾಪುರಿವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಡಾ//ವೀರಸೋಮೇಶ್ವರರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರು ಬಾಳೆಹೊನ್ನೂರು ಹಾಗೂ ಶ್ರೀವೀರಭದ್ರಶಿವಾಚಾರ್ಯ ಮಹಾಸ್ವಾಮೀಜಿಗಳು ಪೀಠಾಧ್ಯಕ್ಷರು ಶ್ರೀ ಕ್ಷೇತ್ರ ಸಿದ್ದರಬೆಟ್ಟ , ಕಾರ್ಯಕ್ರಮವನ್ನ ಶಾಸಕ ಕೆ.ಷಡಕ್ಷರಿಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ನಂಜಾಮರಿ ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ವರ್. ಕರ್ನಾಟಕರಾಜ್ಯವೀರಶೈವ ಲಿಂಗಾಯಿತ ನೌಕೃ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸೋಮಶೇಖರ್. ಮುಖಂಡರಾದಸಿ.ಬಿಶಶಿಧರ್.ಸೇರಿದಂತೆ ಸಮುದಾಯದ ಮುಖಂಡರು.ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕಪಡೆದ ನೂರಕ್ಕು ಹೆಚ್ಚು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರನೆರವೇರಿಸಲಾಗುವುದು.ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದರುಪತ್ರಿಕಾ ಘೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸುರೇಶ್..ಖಜಾಂಚಿಚಿದಾನಂದ್. ನಿರ್ದೇಶಕರಾದತೋಂಟಾರಾಧ್ಯ.
ಸತೀಶ್ ಮುಂತ್ತಾದವರು ಉಪಸ್ಥಿತರಿದರು.
ವರದಿ:ಮಂಜುನಾಥ್ ಹಾಲ್ಕುರಿಕೆ










