
ತಿಪಟೂರು:ತಾಲ್ಲೋಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ವಗ್ಗನಘಟ್ಟ ರಸ್ತೆ ಕೆರೆ ಹಿಂಬಾಗದ ಮಂಜುನಾಥ್ ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಇಟ್ಟಿದ ಬೋನಿನಲ್ಲಿ ಸುಮಾರು 2 ವರ್ಷ ವಯಸ್ಸಿನ ಗಂಡು ಚಿರತೆ ಸೆರೆಯಾಗಿದೆ.
ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಮಧು ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರ ನೆರವಿನಿಂದ ಚಿರತೆಯನ್ನ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಕೆರೆಗೋಡಿ ರಂಗಾಪುರ,ವಗ್ಗನಘಟ್ಟ,ಹೊಸಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು,ಸಾಕು ಪ್ರಾಣಿಗಳನ್ನೂ ಸಹ ತಿಂದ್ದುಹಾಕಿತ್ತು .ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ರಂಗಾಪುರ ಗ್ರಾಮದ ಮಂಜುನಾಥ್ ಎಂಬುವವರ ತೋಟದಲ್ಲಿ ಬೋನ್ ಇರಿಸಿದ್ದು ಆಹಾರ ಅರಸಿಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ವರದಿ:ಮಂಜುನಾಥ್ ಹಾಲ್ಕುರಿಕೆ











