:ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ತಿಪಟೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ನಿರತರನ್ನ ಉದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಚಂದ್ರಶೇಖರ್ ಮಾತನಾಡಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರೈತವಿರೋಧಿಯಾಗಿ ವರ್ತಿಸುತ್ತಿದ್ದು. ಸರ್ಕಾರ ಶವಪೆಟ್ಟಿಗೆಯಲ್ಲಿ ಮಲಗಿದೆ.ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ,ಅಭಿವೃದ್ದಿ ಶೂನ್ಯವಾಗಿದೆ.ಅಧಿಕಾರದ ಕುರ್ಚಿಗಾಗಿ ಕಿತ್ತಾಡುತ್ತಿರುವ ಸಿ.ಎಂ ಹಾಗೂ ಡಿ.ಸಿ.ಎಂ.ರಾಜ್ಯದ ಜನರನ್ನ ಮರೆತ್ತಿದ್ದಾರೆ.ಜನವಿರೋಧಿ ಆಡಳಿತದಿಂದ ಬೇಸತ್ತ, ದಂಗೆಹೇಳುವ ಕಾಲ ದೂರವಿಲ್ಲ.ರಾಜ್ಯದಲ್ಲಿ ಕಬ್ಬು ಬೆಳೆಗಾರರು,ಮೆಕ್ಕೆಜೋಳ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದು.ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.ಆದರೆ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಗಂಗರಾಜು ಮಾತನಾಡಿ ಕಾಂಗ್ರೇಸ್ ಸರ್ಕಾರ ರೈತ ವಿರೋಧಿ,ದಲಿತ ವಿರೋದಿ,ಜನವಿರೋಧಿಯಾಗಿ ಕೆಲಸ ಮಾಡುತ್ತಿದೆ.ರಾಜ್ಯದ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ನೀಡದೆ,ಕೇಂದ್ರಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ತಮ್ಮ ಸರ್ಕಾರದ ವೈಪಲ್ಯ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ರಾಜ್ಯಸರ್ಕಾರದ ಜನವಿರೋಧಿ ರೈತ ವಿರೋಧಿ ಆಡಳಿತದ ವಿರುದ್ದ ರಾಜ್ಯದಾದ್ಯಂತ ಬಿಜೆಪಿ ಹೋರಾಟ ಮಾಡುತ್ತಿದ್ದು ಬಿಜೆಪಿ ಮುಖಂಡ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದ್ದು ಕಾಂಗ್ರೆಸ್ ಸರ್ಕಾರವನ್ನ ಕಿತ್ತೊಗೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ನಗರಸಭಾ ಮಾಜಿ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಮರೆತಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದೆ ತಿಪಟೂರು ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಬಿಸಿ ನಾಗೇಶ್ ರವರು ತಮ್ಮ ಆಡಳಿತ ಅವಧಿಯಲ್ಲಿ ತಂದ ಅನುದಾನವನ್ನ ಗುದ್ದಲಿ ಪೂಜೆ ಮಾಡುವುದರಲ್ಲಿ ಕಾಲ ಕಳೆಯುತ್ತಿರುವ ಶಾಸಕರು ಅಭಿವೃದ್ಧಿ ಅಭಿವೃದ್ಧಿಗಳಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಬೇಕು ಎಂದು ತಿಳಿಸಿದರು ಪ್ರತಿಭಟನೆಯಲ್ಲಿ ಬಿಜೆಪಿ ಅಧ್ಯಕ್ಷ ಸತೀಶ್ ನಾಗರಾಧ್ಯಕ್ಷ ಜಗದೀಶ್ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಲ್ಕುರಿಕೆ ನಾಗರಾಜು .ನಗರಸಭೆ ಮಾಜಿ ಸದಸ್ಯರಾದ ಶಶಿಕಿರಣ್ ರಾಮ್ ಮೋಹನ್. ಸಂಧ್ಯಾ ಕಿರಣ್.ಮೋಹನ್ ರಾಜ್.ಬಿಜೆಪಿ ಯುವಮುಖಂಡ ವಿಶ್ವದೀಪ್.ತರಕಾರಿ ಗಂಗಾಧರ್ .ಈಚನೂರು ಗ್ರಾ.ಪಂ ಅಧ್ಯಕ್ಷ ಉದಯ್ ಕುಮಾರ್. ಬಿಸ್ಲೆಹಳ್ಳಿ ಜಗಧೀಶ್ ಬಾಲರಾಜು.ಬಸವರಾಜು.ಮುಂತ್ತಾದವರು ಉಪಸ್ಥಿತರಿದರು
ವರದಿ:ಮಂಜುನಾಥ್ ಹಾಲ್ಕುರಿಕೆ







