ತಿಪಟೂರು: ಕಾಂಗ್ರೇಸ್ ಪ್ರಭಾವಿ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಬೇಕು. ಆಧಿಕಾರ ನೀಡದೆ ಮೋಸ ಮಾಡಿದರೆ ಕಾಂಗ್ರೆಸ್ ರಾಜ್ಯದಲ್ಲಿ ಸರ್ವನಾಶವಾಗುತ್ತದೆ- ಈಡಿಗ ಸಮಾಜದ ಪೀಠಾಧ್ಯಕ್ಷರಾದಪ್ರಣವಾನಂದಶ್ರೀ ಮಹಾಸ್ವಾಮೀಜಿ ತಿಳಿಸಿದರು.
ತಿಪಟೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಈಡಿಗ ಸಮಾಜದ ಪ್ರಣವಾನಂದ ಶ್ರೀಗಳು.ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಕೇವಲ ಮೂರು ರಾಜ್ಯಗಳಲ್ಲ ಅಷ್ಟೇ ಅಧಿಕಾರದಲ್ಲಿರುವುದು ಕೊಟ್ಟ ಮಾತಿನಂತೆ ಎರಡುವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ಸರ್ವನಾಶವಾಗುತ್ತಿದೆ ಎಂದು ಭವಿಷ್ಯ ನುಡಿದಿದರು.ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಸಿದ್ಧರಾಮಯ್ಯನವರು ಕೇವಲ ಅಹಿಂದ ಜಾತಿಗಳಿಗೆ ಏನನ್ನು ಮಾಡಿದ್ದಾರೆ ಎಂಬುದನ್ನು ಶ್ವೇತಾ ಪತ್ರದ ಮೂಲಕ ತಿಳಿಸಲಿ.ಮಾನ್ಯ ಸಿದ್ದರಾಮಯ್ಯನವರು ಕೇವಲ ಅಹಿಂದ ಹೆಸರು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಹೊರತು ಸಮಾಜಕ್ಕೆ ಯಾವುದೇ ಕೊಡುಗೆಯನ್ನು ನೀಡಿಲ್ಲ.
ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದಕ್ಕೆ ಯೋಗ್ಯರಾಗಿದ್ದಾರೆ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿ ಇದ್ದಾಗ ಅಧ್ಯಕ್ಷರಾಗಿ ಅಧಿಕಾರಕ್ಕೆ ಬರುವಲ್ಲಿ ಡಿಕೆ ಪಾತ್ರ ಮಹತ್ವದ್ದು ಅವರ ದುಡಿಮೆಗಾಗಿ ಇಂದು ಕೂಲಿ ಕೊಡಲೇಬೇಕು ಹಾಗಾಗಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯದ 32 ಹಿಂದುಳಿದ ವರ್ಗಗಳ ಮಠಾಧೀಶರು ಒಕ್ಕಲಿನಿಂದ ಈಗಾಗಲೇ ಡಿಕೆ ಶಿವಕುಮಾರ್ ಅವರ ಮನೆಗೆ ತೆರಳಿ ಬೆಂಬಲ ಸೂಚಿಸಿದ್ದೇವೆ ..
ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ತಲೆಯ ಮೇಲೆ ಪ್ರಮಾಣ ಮಾಡಿ ಎರಡುವರೆ ವರ್ಷ ಸಿಎಂ ಸ್ಥಾನ ಬಿಡುವುದಾಗಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯನವರು ಇಂದು ಆಡಿದ ಮಾತಿಗೆ ಬೆಲೆ ಕೊಡದೆ ಸ್ಥಾನವನ್ನು ತ್ಯಜಿಸದೆ ಇರುವುದು ದುರದೃಷ್ಟಕರ ಹಾಗಾಗಿ ಕೂಡಲೇ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಡಲೇಬೇಕೆಂದು ಇದೇ ವೇಳೆ ಅವರು ಆಗ್ರಹಿಸಿದರು.
ವರದಿ:ಮಂಜುನಾಥ್ ಹಾಲ್ಕುರಿಕೆ





