ಮಂತ್ರಾಲಯ: ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ನಡೆದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಅವರಿಗೆ ಅಮೆರಿಕಾದ ಯೋಗ ಸಂಸ್ಕೃತಂ ಯೂನಿವರ್ಸಿಟಿ, ಫ್ಲೋರಿಡಾ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರಧಾನಿಸಲಾಯಿತು.
ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಗೌರವ ಪದವಿಯನ್ನು ನೀಡಲಾಗಿದೆ. ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ 108 ಶ್ರೀ ಮದ್ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಆಶೀರ್ವದಿಸಿದರು.

ವಿ. ಯೋಗೇಶ್ ಅವರು ರಾಜಕೀಯ, ಧಾರ್ಮಿಕ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವರ ಸಾಮಾಜಿಕ ಬದ್ಧತೆ ಮತ್ತು ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ, ನ್ಯಾಯಾಧೀಶ ಕೆ.ಎನ್. ಫಣೀಂದ್ರ ಹಾಗೂ ಚಲನಚಿತ್ರ ನಟ ರಾಘವೇಂದ್ರ ರಾಜಕುಮಾರ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಹರಗುರು ಚರಮೂರ್ತಿಗಳು ಮತ್ತು ಹಿರಿಯರು ಉಪಸ್ಥಿತರಿದ್ದರು.
ವರದಿ :ಮಂಜುನಾಥ್ ಹಾಲ್ಕುರಿಕೆ





