Spread the love

ತಿಪಟೂರು: ನಗರದ ಹಳೇಪಾಳ್ಯ ಪ್ರದೇಶದ ಗಾಯತ್ರಿನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಮಾರ್ಚ್ 27ರಂದು ರಾಮನವಮಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ರಾಮನವಮಿ ಅಂಗವಾಗಿ ವಿಶೇಷ ಹೋಮ ಹಾಗೂ ಭಜನೆ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀರಾಮದೇವರ ಉತ್ಸವ ಮೆರವಣಿಗೆ ಏರ್ಪಡಿಸಲಾಗಿದೆ.ಈ ಸಂದರ್ಭದಲ್ಲಿ ಭಕ್ತರಿಗೆ ಪಾನಕ ಮತ್ತು ಫಲಹಾರ ವಿತರಣೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ರಾಮ ಚಾರಿಟಬಲ್ ಟ್ರಸ್ಟ್ ಮನವಿ ಮಾಡಿದೆ.

ವರದಿ :ಮಂಜುನಾಥ್ ಹಾಲ್ಕುರಿಕೆ

error: Content is protected !!