ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಶ್ವತ್ ನಾರಾಯಣ್ ಅವರ ತಂದೆ ವಿ.ಎಂ. ಗುತ್ಯಪ್ಪ (86) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಅಡ್ಡೆ ವಿಶ್ವನಾಥಪುರದಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ಗುತ್ಯಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಮೃತರ ಅಂತಿಮ ವಿಧಿವಿಧಾನಗಳು ಇಂದು ದ್ವಾರನಕುಂಟೆಯಲ್ಲಿ ನೆರವೇರಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಕುಟುಂಬಸ್ಥರು ಹಾಗೂ ಬಂಧು-ಬಳಗದವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬಂಧುಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವರದಿ :ಮಂಜುನಾಥ್ ಹಾಲ್ಕುರಿಕೆ





