: ತಿಪಟೂರು ತಾಲ್ಲೂಕನ್ನು ಶೀಘ್ರದಲ್ಲೇ ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯಿಂದ ತಿಪಟೂರು ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ತಿಪಟೂರು ಕೈಬಿಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಶೀಘ್ರದಲ್ಲೇ ತಿಪಟೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ





